ಈ ಬಾರಿ ರಾಜ್ಯದಲ್ಲಿ 20ಕ್ಕೂ ಅಧಿಕ ಸೀಟುಗಳು ಕಾಂಗ್ರೆಸ್’ಗೆ ಬರಲಿವೆ !

1 Min Read

ಹುಬ್ಬಳ್ಳಿ: ಈ ಬಾರಿಯ ಚುನಾವಣೆ ಸತ್ಯ ಹಾಗೂ ಸುಳ್ಳು, ಪ್ರೀತಿ ಮತ್ತು ದ್ವೇಷದ ಮಧ್ಯೆ ನಡೆಯುತ್ತಿರುವ ಚುನಾವಣೆಯಾಗಿದೆ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆ ಸತ್ಯ ಹಾಗೂ ಸುಳ್ಳು, ಪ್ರೀತಿ ಮತ್ತು ದ್ವೇಷದ ಮಧ್ಯೆ ನಡೆಯುತ್ತಿರುವ ಚುನಾವಣೆಯಾಗಿದೆ. ಕಳೆದ 10 ವರ್ಷದಲ್ಲಿ ಪ್ರಧಾನಿ ಮೋದಿಯವರ ಆಡಳಿತ ಹಾಗೂ ಅಭಿವೃದ್ಧಿ ಪರ ಯೋಜನೆಗಳು ಶೂನ್ಯವಾಗಿದ್ದು, ಸುಳ್ಳಿನ ಆಶ್ರಯದಲ್ಲಿ ಮೋದಿ ಚುನಾವಣೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.
ತಮ್ಮ ಆಡಳಿತದ ಸಾಧನೆ ಹಾಗೂ ಅಭಿವೃದ್ಧಿ ಪರ ವಿಷಯಗಳ ಬಗ್ಗೆ ಚರ್ಚಿಸದ ಬಿಜೆಪಿಯವರು, ಕೇವಲ ಸಮಾಜದಲ್ಲಿ ದ್ವೇಷ ಹಾಗೂ ಕೋಮುವಾದ ಬಿತ್ತುವ ಮೂಲಕ ಅಧಿಕಾರಕ್ಕೆ ಬರುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷವು ರಾಜ್ಯದ ಬಡವರು, ಮಹಿಳೆಯರು, ಮಧ್ಯಮ ವರ್ಗದ ಪರ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಜನ ಮನ್ನಣೆ ಪಡೆದಿದೆ. ಈ ಬಾರಿ ರಾಜ್ಯದಲ್ಲಿ 20ಕ್ಕೂ ಅಧಿಕ ಸೀಟುಗಳು ಕಾಂಗ್ರೆಸ್ಗೆ ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share This Article