ಈ ಬಾರಿ IPL ನಲ್ಲಿ ವಿರಾಟ್ ಕೊಹ್ಲಿ ದಾಟಬಲ್ಲ ಮೈಲುಗಲ್ಲುಗಳು!

1
51

ವಿರಾಟ್ ಕೊಹ್ಲಿ ಪ್ರತಿ ಬಾರಿ ಅಂಣಗಳಕ್ಕಿಳಿದಾಗಲೂ ದಾಖಲೆಯನ್ನು ಮಾಡುತ್ತಾ ಸಾಗುತ್ತಿದ್ದಾರೆ. ಹೀಗಾಗಿ ಕೊಹ್ಲಿ ಮೇಲೆ ನಿರೀಕ್ಷೆಗಳು ಬಹಳಷ್ಟು ದೊಡ್ಡದಿದೆ. ಆ ನಿರೀಕ್ಷೆಗೆ ತಕ್ಕಂತೆಯೇ ಕಳೆದ ಒಂದು ದಶಕದಿಂದಲೂ ಕೊಹ್ಲಿ ಬ್ಯಾಟ್ ಬನೀಸುತ್ತಲೇ ಮುಂದುವರಿಸಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿಯೂ ಕೊಹ್ಲಿ ಸಾಕಷ್ಟು ದಾಖಲೆಗಳನ್ನು ಮುರಿಯುವ ನಿರೀಕ್ಷೆಯಿದೆ.

 

ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಂತೆಯೇ ಐಪಿಎಲ್‌ನಲ್ಲಿಯೂ ರನ್ ಮಳೆಯನ್ನು ಹರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧಧ ಸರಣಿಯಲಲ್ಇ ಅದ್ಭುತ ಫಾರ್ಮ್‌ನಲ್ಲಿದ್ದ ವಿರಾಟ್ ಕೊಹ್ಲಿ ಈಗ ಮತ್ತೊಮ್ಮೆ ಐಪಿಎಲ್‌ನಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ಸಜ್ಜಾಗಿದ್ದಾರೆ.

ವಿರಾಟ್ ಕೊಹ್ಲಿ ಐಪಿಎಲ್‌ನ ಆರಂಭಿಕ ಆವೃತ್ತಿಯಿಂದಲೂ ಆರ್‌ಸಿಬಿ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಐಪಿಎಲ್ ಕ್ರಿಕೆಟ್‌ನಲ್ಲಿ ಆರಂಭಿಕ ಆವೃತ್ತಿಯಿಂದ ಓವರೆಗೆ ಒಂದೇ ಫ್ರಾಂಚೈಸಿ ಪರವಾಗಿ ಆಡಿದ ಏಕೈಕ ಕ್ರಿಕೆಟಿಗ ಎಂಬ ಹೆಗ್ಗಳಿಕೆ ವಿರಾಟ್ ಕೊಹ್ಲಿಗೆ ಇದೆ. 2008ರ ಐಪಿಎಲ್‌ನ ಚೊಚ್ಚಲ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ಆರ್‌ಸಿಬಿ ತಂಡದ ಪಾಲಾಗಿದ್ದರು. ಆ ಬಳಿಕ ಸತತವಾಗಿ ಆರ್‌ಸಿಬಿ ತಂಡವನ್ನು ಮಾತ್ರವೇ ಪ್ರತಿನಿಧಿಸಿಕೊಂಡು ಬಂದಿದ್ದಾರೆ.

ಐಪಿಎಲ್‌ನಲ್ಲಿ ಸುದೀರ್ಘ ಕಾಲ ಕ್ರಿಕೆಟ್ ಆಡಿರುವ ವಿರಾಟ್ ಕೊಹ್ಲಿ ಈಗ ಮಹತ್ವದ ಮೈಲಿಗಲ್ಲಿನ ಸನಿಹದಲ್ಲಿದ್ದಾರೆ. ಆರ್‌ಸಿಬಿ ತಂಡದ ಪರವಾಗಿ 200 ಪಂದ್ಯಗಳನ್ನು ಆಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಲಿದ್ದಾರೆ. ಆರ್‌ಸಿಬಿ ಪರವಾಗಿ ಈವರೆಗೆ 192 ಪಂದ್ಯಗಳಲ್ಲಿ ಆಡಿದ್ದಾರೆ. ಲೀಗ್‌ಹಂತದಲ್ಲಿ 8 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಭಾಗಿಯಾದರೆ ಈ ಸಾಧನೆಯನ್ನು ಕೊಹ್ಲಿ ಮಾಡಲಿದ್ದಾರೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಸಾಧನೆ ಎಂ ಎಸ್ ಧೋನಿ ಹೆಸರಿನಲ್ಲಿದ್ದು ಧೋನಿ 204 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ.

ಇನ್ನು ವಿರಾಟ್ ಕೊಹ್ಲಿ ಈ ಬಾರಿಯ ಆವೃತ್ತಿಯಲ್ಲಿ ಮತ್ತೊಂದು ಮಹತ್ವದ ದಾಖಲೆಯನ್ನು ತನ್ನ ಹೆಸರಿಗೆ ಬರೆಯಲಿದ್ದಾರೆ. ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರನಾಗಿದ್ದಾರೆ. ಸದ್ಯ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ 5878 ರನ್‌ಗಳನ್ನು ಗಳಿಸಿದ್ದು 6000 ರನ್‌ಗಳ ಸಾಧನೆಗೆ ಕೇವಲ 122 ರನ್‌ಗಳ ಅವಶ್ಯಕತೆಯಿದೆ.

ಇನ್ನು ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್‌ನಲ್ಲಿ ಭಾರತೀಯ ಆಟಗಾರರ ಪೈಕಿ ಮತ್ತೊಂದು ಮಹತ್ವದ ಸಾಧನೆಯನ್ನು ಮಾಡುವ ಸನಿಹದಲ್ಲಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 10,000 ರನ್‌ಗಳಿಸಿದ ಮೊದಲ ಆಟಗಾರ ಎಂಬ ದಾಖಲೆ ಬರೆಯಲು ವಿರಾಟ್ ಕೊಹ್ಲಿಗೆ 269 ರನ್‌ಗಳ ಅವಶ್ಯಕತೆಯಿದೆ. ಭಾರತೀಯ ಆಟಗಾರರ ಪೈಕಿ ವಿರಾಟ್ ಕೊಹ್ಲಿಯೇ ಅತಿ ಹೆಚ್ಚು ಟಿ20 ರನ್‌ಗಳಿಸಿದ ಆಟಗಾರನಾಗಿದ್ದು 9731 ರನ್‌ಗಳಿಸಿದ್ದಾರೆ. ಎರಡನೇ ಸ್ಥಾನದಲ್ಲಿ ರೋಹಿತ್ ಶರ್ಮಾ ಇದ್ದು 9065 ರನ್‌ಗಳಿಸಿದ್ದಾರೆ. ಒಟ್ಟಾರೆಯಾಗಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರನಾಗಿ ವೆಸ್ಟ್ ಇಂಡೀಸ್‌ನ ಕ್ರೀಸ್ ಗೇಲ್ ಇದ್ದು 13720 ರನ್‌ಗಳಿಸಿದ್ದಾರೆ.

1 COMMENT

LEAVE A REPLY

Please enter your comment!
Please enter your name here