ಈ ವಾರ ಪೂರ್ತಿ ಈ ರಾಜ್ಯಗಳಲ್ಲಿ ಭಾರೀ ಮಳೆ

0
45

ನೈಋತ್ಯ ಮುಂಗಾರು ಚುರುಕಾಗಿದ್ದು, ಈ ವಾರದಲ್ಲಿ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ನೈಋತ್ಯ ಮುಂಗಾರು ಪ್ರಭಾವದಿಂದಾಗಿ ದಕ್ಷಿಣ, ಪಶ್ಚಿಮ ಹಾಗೂ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ.

ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಈ ಅವಧಿಯಲ್ಲಿ ಅಧಿಕ ಮಳೆಯಾಗುವುದಾಗಿ ತಿಳಿಸಲಾಗಿದೆ. ಸೆಪ್ಟೆಂಬರ್ 7ರಿಂದ ದೇಶದ ಹಲವು ಭಾಗಗಳಲ್ಲಿ ಮಳೆ ಚುರುಕು ಪಡೆಯಲಿರುವುದಾಗಿ ಇಲಾಖೆ ತಿಳಿಸಿದೆ.

ಪಶ್ಚಿಮ ದಿಕ್ಕಿನಿಂದ ಮಾರುತಗಳು ವಾಯವ್ಯ ದಿಕ್ಕಿನೆಡೆಗೆ ಚಲಿಸಲಿದ್ದು, ವಾಯುಭಾರ ಕುಸಿತವಾಗಲಿದೆ. ಇದರ ಪ್ರಭಾವದಿಂದಾಗಿ ದಕ್ಷಿಣ ಒಡಿಶಾ, ಆಂಧ್ರದ ಕರಾವಳಿ, ತೆಲಂಗಾಣ, ವಿದರ್ಭಾ ಹಾಗೂ ಛತ್ತೀಸ್‌ಗಡದಲ್ಲಿ ಮಂಗಳವಾರ ಅಧಿಕ ಮಟ್ಟದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಮಧ್ಯ ಮಹಾರಾಷ್ಟ್ರ, ಉತ್ತರ ಕೊಂಕಣ, ಗುಜರಾತ್‌ನಲ್ಲಿ ಸೆಪ್ಟೆಂಬರ್ 7-9ರವರಗೆ, ಉತ್ತರ ಕೊಂಕಣದಲ್ಲಿ ಸೆಪ್ಟೆಂಬರ್ 7-8ರವರೆಗೆ ಹಾಗೂ ಮಧ್ಯ ಮಹಾರಾಷ್ಟ್ರ, ಗುಜರಾತ್‌ನಲ್ಲಿ ಸೆಪ್ಟೆಂಬರ್ 8ರಂದು, ತೆಲಂಗಾಣದಲ್ಲಿ ಸೆಪ್ಟೆಂಬರ್ 7ರಂದು ಅತ್ಯಧಿಕ ಮಳೆಯಾಗುವುದಾಗಿ ತಿಳಿಸಿದೆ. ವಾಯವ್ಯ ಭಾರತದಲ್ಲಿ ಈ ಅವಧಿಯಲ್ಲಿ ವ್ಯಾಪಕ ಮಳೆಯಾಗಲಿದ್ದು, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪಂಜಾಬ್, ಜಮ್ಮು ಹಾಗೂ ರಾಜಸ್ಥಾನದಲ್ಲಿ ಸೆಪ್ಟೆಂಬರ್ 7-9ರವರೆಗೂ ಮಳೆ ಮುಂದುವರೆಯುವುದಾಗಿ ತಿಳಿಸಲಾಗಿದೆ.

 

 

 

 

LEAVE A REPLY

Please enter your comment!
Please enter your name here