ಬೆಂಗಳೂರು: ಈ ಸರ್ಕಾರವು ಕಣ್ಣಿದ್ದೂ ಕುರುಡಾಗಿದೆ. ಕಿವಿ ಇದ್ದರೂ ಕಿವುಡಾಗಿದೆ. ತಲೆ ಇದ್ದರೂ ಬುದ್ಧಿ ಭ್ರಮಣೆ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಈ ಸರ್ಕಾರವು ಕಣ್ಣಿದ್ದೂ ಕುರುಡಾಗಿದೆ. ಕಿವಿ ಇದ್ದರೂ ಕಿವುಡಾಗಿದೆ. ತಲೆ ಇದ್ದರೂ ಬುದ್ಧಿ ಭ್ರಮಣೆ ಆಗಿದೆ.
ಸರ್ಕಾರದ ನೀತಿ, ನಿರ್ಧಾರ ಹಾಗೂ ಚಟುವಟಿಕೆಗಳನ್ನು ನೋಡಿದರೆ ಈ ಸರ್ಕಾರಕ್ಕೆ ಮನುಷ್ಯತ್ವ ಇಲ್ಲ ಎಂಬುದರ ಸ್ಪಷ್ಟ ಸೂಚನೆಗಳು ಗೊತ್ತಾಗುತ್ತವೆ. ಕರ್ನಾಟಕದಲ್ಲಿ ಡೆಂಗ್ಯೂ ಮನೆ ಮನೆಗೆ ಹಬ್ಬುತ್ತಿದೆ. ಡೆಂಗ್ಯೂಗೆ ಸರಿಯಾದ ಚಿಕಿತ್ಸೆ ಲಭಿಸುತ್ತಿಲ್ಲ. ವೈದ್ಯರು, ಔಷಧಿಯ ಲಭ್ಯತೆ ಇಲ್ಲ. ಡೆಂಗ್ಯೂ ಅವತಾರವನ್ನು ನಿಯಂತ್ರಿಸಲು, ಅದರ ಬಗ್ಗೆ ಮಾತನಾಡಲು ವೈದ್ಯಕೀಯ ಸಚಿವರು- ಆರೋಗ್ಯ ಸಚಿವರು ಎಲ್ಲಿ ಹೋಗಿದ್ದಾರೆ ಎಂಬುದನ್ನು ಹುಡುಕಬೇಕಾಗಿದೆ ಎಂದು ತಿಳಿಸಿದರು.
ಇನ್ನೂ ಪಿಯುಸಿ, ಎಸ್ಸೆಸ್ಸೆಲ್ಸಿ, ಇಂಜಿನಿಯರಿಂಗ್, ವೈದ್ಯಕೀಯ ಸೇರಿ ಎಲ್ಲಾ ವಿದ್ಯಾರ್ಥಿಗಳ ಶುಲ್ಕ ಹೆಚ್ಚು ಮಾಡುತ್ತಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ. ಪೆಟ್ರೋಲ್-3 ರೂ., ಡೀಸೆಲ್- 3.50 ರೂ. ಬೆಲೆ ಹೆಚ್ಚಿಸಿದ್ದಾರೆ. ಎಲ್ಲರ ಮನೆಯಲ್ಲೂ ಹಸು ಇರಲಾರದು. ಆದರೆ, ಎಲ್ಲರ ಮನೆಯಲ್ಲಿ ದ್ವಿಚಕ್ರ ವಾಹನ ಇದ್ದೇ ಇದೆ. ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಬಿಸಿ ಎಲ್ಲರನ್ನೂ ತಟ್ಟಿದೆ. ಹಾಲಿನ ಬೆಲೆ ಹೆಚ್ಚಳದ ನಿರ್ಧಾರವನ್ನು ಈ ಸರ್ಕಾರ ಮಾಡಿದ್ದು, ಇದು ಮನೆಮುರುಕ ನಿರ್ಣಯ” ಎಂದು ಟೀಕಿಸಿದರು.
ಈ ಸರ್ಕಾರವು ಕಣ್ಣಿದ್ದೂ ಕುರುಡಾಗಿದೆ. ಕಿವಿ ಇದ್ದರೂ ಕಿವುಡಾಗಿದೆ !
Date: