ಮೂರನೆ ಅಲೆ ನಿರೀಕ್ಷೆಯಂತೆ, ವರದಿಗಳ ಪ್ರಕಾರ ವೇಗವಾಗಿ ಹರಡುತ್ತಿದೆ. 3.95 % ರಷ್ಟು ಪಾಸಿಟಿವಿಟಿ ಕಂಡುಬಂದಿದೆ. ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ಐದು ಜಿಲ್ಲೆಗಳಲ್ಲಿ ಕರೋನಾ ವೇಗವಾಗಿ ಹರಡುತ್ತಿದೆ.
ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಕೋಲಾರ ಉಡುಪಿ ಜಿಲ್ಲೆಗಳಲ್ಲಿ ಕರೋನಾ ವೇಗವಾಗಿ ಹರಡುತ್ತಿದೆ. ಈ ಕುರಿತು ಅಲ್ಲಿನ ಅಧಿಕಾರಿಗಳೊಂದಿಗೆ ಮಾತನಾಡಿ ಸೋಂಕಿನ ಪ್ರಮಾಣ ಕಡಿಮೆ ಮಾಡಲು ಕಾರ್ಯ ನಿರ್ವಹಿಸಲಾಗುವುದು ಎಂದು ತಿಳಿಸಿದರು.
2 ಡೋಸ್ ಲಸಿಕೆ ಪಡೆಯದವರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ. ಕೇಸ್ ಹೆಚ್ಚಾಗುವುದನ್ನು ತಡೆಯಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಇನ್ನಷ್ಟು ಕೋವಿಡ್ ಪ್ರಕರಣ ಏರಿಕೆಯಾಗುವ ಸಾಧ್ಯತೆ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಮಾಹಿತಿ ನೀಡಿದೆ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಬೆಂಗಳೂರಿನಲ್ಲಿ ತಿಳಿಸಿದರು.