ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮನ: ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗಿ

Date:

ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮನ: ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗಿ

ಉಡುಪಿ: ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮಧ್ವಜ ಸ್ಥಾಪನೆ ಮಾಡಿದ ಎರಡು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದಾರೆ. ವಿಶ್ವಪರ್ಯಾಯ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಪ್ರಧಾನಿಯ ಪ್ರಮುಖ ಉದ್ದೇಶವಾಗಿದೆ.

ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಭಗವದ್ಗೀತೆಯನ್ನು ಪಠಿಸಲಿದ್ದು, ಪ್ರಧಾನಿ ಮೋದಿ ಸ್ವತಃ ಗೀತೆಯ 15ನೇ ಅಧ್ಯಾಯದ ಶ್ಲೋಕಗಳನ್ನು ಪಠಿಸಲಿದ್ದಾರೆ. ಮಠದಲ್ಲಿ ಸುಮಾರು ₹2 ಕೋಟಿಯ ವೆಚ್ಚದಲ್ಲಿ ನಿರ್ಮಿತ ಸ್ವರ್ಣ ಲೇಪಿತ ತೀರ್ಥ ಮಂಟಪವನ್ನು ಅವರು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.

ನಂತರ ಮಧ್ಯಾಹ್ನ ಸಾರ್ವಜನಿಕ ಸಭೆಯನ್ನೂದ್ದೇಶಿಸಿ ಭಾಷಣ ಮಾಡುವರು. ಪ್ರಧಾನಿಯ ಭೇಟಿ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, 3000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಬೆಳಗ್ಗೆ 8 ರಿಂದ ಮಧ್ಯಾಹ್ನ 3 ರವರೆಗೆ ಮಠಕ್ಕೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ.

ಪ್ರಧಾನಿ ಮೋದಿಯ ಇಂದಿನ ವೇಳಾಪಟ್ಟಿ

11:05 AM — ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ

11:15 AM — ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ

11:30 AM — ಉಡುಪಿಯ ಹೆಲಿಪ್ಯಾಡ್‌ಗೆ ಆಗಮನ

11:40 – 12:00 PM — ರೋಡ್ ಶೋ (ಬನ್ನಂಜೆ ವೃತ್ತ → ಕಲ್ಸಂಕ ಜಂಕ್ಷನ್)

12:00 PM — ಶ್ರೀಕೃಷ್ಣ ಮಠಕ್ಕೆ ಭೇಟಿ
  • ಸ್ವರ್ಣ ಲೇಪಿತ ತೀರ್ಥ ಮಂಟಪ ಉದ್ಘಾಟನೆ

1:00 PM — ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ

ನಂತರ — ಸಾರ್ವಜನಿಕ ಸಭೆಯಲ್ಲಿ ಪ್ರಧಾನಿಯವರ ಭಾಷಣ

ಸ್ವರ್ಣ ಲೇಪಿತ ತೀರ್ಥ ಮಂಟಪ

ಪುತ್ತಿಗೆ ಸ್ವಾಮೀಜಿಯ ಸನ್ಯಾಸ ಜೀವನದ 50ನೇ ವರ್ಷಾಚರಣೆಯ ಅಂಗವಾಗಿ ನಿರ್ಮಿಸಲಾದ ತೀರ್ಥ ಮಂಟಪವು ₹2 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಯಾಗಿದ್ದು, ಉದ್ಘಾಟನೆಯ ನಂತರ ಪ್ರಧಾನಿ ಮೋದಿ ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡಲಿದ್ದಾರೆ.

Share post:

Subscribe

spot_imgspot_img

Popular

More like this
Related

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ...

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ ಬೆಂಗಳೂರು:...

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್ ಬಡ್ತಿ, 20 ಮಂದಿಗೆ ವರ್ಗಾವಣೆ

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್...

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು ರಾತ್ರಿ...