No menu items!
11.1 C
Munich
Wednesday, April 29, 2026

ಉದ್ಯೋಗ ಖಾಲಿ ಇದೆ; ಆಸಕ್ತರು ಅರ್ಜಿ ಸಲ್ಲಿಸಿ

Must read

ಧಾರವಾಡದಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ ಒಬ್ಬರು ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ನೇಮಕ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿದೆ.

ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಇಲಾಖೆ ಮತ್ತು ಸರ್ಕಾರದಿಂದ ದೊರೆಯಲಾಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ಪ್ರತಿ ಗ್ರಾಮ ಪಂಚಾಯತಿಗೆ ಒಬ್ಬರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಲಾಗುತ್ತದೆ.

ತಾಲೂಕಿನಲ್ಲಿ ನರೇಂದ್ರ, ಹೆಬ್ಬಳ್ಳಿ, ತಡಕೋಡ ಗ್ರಾಮ ಪಂಚಾಯತಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ 3 ಹುದ್ದೆಗಳು ಖಾಲಿ ಇವೆ. ಅವುಗಳಿಗೆ ಮಾಸಿಕ 6 ಸಾವಿರ ರೂ. ಗೌರವಧನ ನೀಡಲಾಗುತ್ತದೆ.

 

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ತಾಲೂಕಾ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರಿಂದ ಪಡೆದು, ಭರ್ತಿ ಮಾಡಿ ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9742757903 ಮತ್ತು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 0836-2744474ಯನ್ನು ಸಂಪರ್ಕಿಸಬಹುದು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article