No menu items!
19.4 C
Munich
Friday, May 1, 2026

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ವಿಶ್ವಾಸ: ಬಸವರಾಜ ಬೊಮ್ಮಾಯಿ

Must read

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ವಿಶ್ವಾಸ: ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರೀ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಜನರಲ್ಲಿ ಅಸಮಾಧಾನ ಹೆಚ್ಚಾಗಿದೆ ಎಂದು ಹೇಳಿದರು. 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ಅಹಿಂದ ವರ್ಗದ ಜನರೂ ಈಗ ಭ್ರಮನಿರಸನಗೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಇರಡು ಕ್ಷೇತ್ರಗಳಲ್ಲಿಯೂ ಬದಲಾವಣೆಯ ಗಾಳಿ ಬೀಸುತ್ತಿದ್ದು, ಅದು ಮತಗಳ ರೂಪದಲ್ಲಿ ವ್ಯಕ್ತವಾಗಲಿದೆ ಎಂದು ಅವರು ಹೇಳಿದರು. ಈ ಹಿನ್ನೆಲೆ, ಬಿಜೆಪಿ ಅಭ್ಯರ್ಥಿಗಳು ಎರಡೂ ಕ್ಷೇತ್ರಗಳಲ್ಲಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

- Advertisement -spot_img

More articles

- Advertisement -spot_img

Latest article