ಉಪಚುನಾವಣೆಗೆ ಎಲ್ಲಾ ಕ್ಷೇತ್ರದಲ್ಲು ಅಭ್ಯರ್ಥಿಗಳು ಬಿರುಸಿನಿಂದ ಪ್ರಕಾರನ್ನು ಮಾಡುತ್ತಿದ್ದಾರೆ ಇದೀಗ ಮುಖ್ಯಮಂತ್ರಿಗಳ ಸರದಿ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ ಎಲ್ಲಾ ಕ್ಷೇತ್ರಗಳಲ್ಲಿಯೂ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗುತ್ತಿದೆ. ನೂರಕ್ಕೆ ನೂರರಷ್ಟು 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮಾಡಿರುವ ಆರೋಪಗಳಿಗೆ ಉತ್ತರ ಕೊಡಲು ಇಷ್ಟವಿಲ್ಲ. ಉಪಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಕ್ಷೇತ್ರದ ರಾಜ್ಯದ ಜನ ಯಾರೊಂದಿಗೆ ಇದ್ದಾರೆ ಎನ್ನುವುದು ಗೊತ್ತಾಗುತ್ತದೆ. ಮುಂದಿನ ಅವಧಿಯಲ್ಲಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ರೂಪಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.