ಶಾಸಕರ ಅನರ್ಹತೆ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಇದೆ. ಈಗಿರುವ ಪೀಠದಿಂದ ನಮ್ಮ ಕೇಸ್ ವರ್ಗಾವಣೆ ಆಗಬಹುದು. ಸಾಂವಿಧಾನಿಕ ಪೀಠಕ್ಕೆ ಪ್ರಕರಣ ವರ್ಗಾವಣೆ ಆಗಬಹುದು. ಪರಿಸ್ಥಿತಿ ಹೀಗಿರುವಾಗ ಯಾರೋ ವದಂತಿಯನ್ನು ಹಬ್ಬಿಸುತ್ತಿದ್ದಾರೆ ಎಂದು ಅನರ್ಹ ಶಾಸಕ ಹೆಚ್. ವಿಶ್ವನಾಥ್ ಹೇಳಿದ್ದಾರೆ .
ಹುಣಸೂರು ಕ್ಷೇತ್ರದ ಟಿಕೆಟ್ ಬೇರೆಯವರಿಗೆ ಕೊಡಲಾಗುತ್ತದೆ ಎಂದು ವದಂತಿ ಹಬ್ಬಿಸುತ್ತಿದ್ದಾರೆ. ಯಾವ ಶಾಸಕ ಕ್ಷೇತ್ರ ಬಿಟ್ಟು ಕೊಡುವುದಿಲ್ಲ. ಗೆದ್ದಿರುವ ಕ್ಷೇತ್ರ ಆ ಶಾಸಕನ ಜೀವನವಾಗಿರುತ್ತದೆ. ಚುನಾವಣೆ ನಡೆದಲ್ಲಿ ಹುಣಸೂರಿನಿಂದ ನಾನೇ ಸ್ಪರ್ಧೆ ಮಾಡುತ್ತೇನೆ.