ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರು ಗೌಡ್ತಿ ಅಲ್ಲ ಅವರು ನಾಯ್ಡು ಎಂದು ಹೇಳಿಕೆ ನೀಡಿರುವ ಹಾಲಿ ಮಂಡ್ಯ ಸಂಸದ ಎಲ್.ಆರ್.ಶಿವರಾಮೇಗೌಡರ ವಿರುದ್ಧ ಅಂಬಿ ತವರು ಗ್ರಾಮವಾದ ದೊಡ್ಡರಸಿನಕೆರೆ ಗೇಟ್ ಬಳಿ ಅಂಬರೀಷ್ ಅಭಿಮಾನಿಗಳು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಈ ವೇಳೆ ಮಾತನಾಡಿದ ದೊಡ್ಡರಸಿನಕೆರೆ ಗ್ರಾಮಸ್ಥರು ಸುಮಲತಾ ಮಂಡ್ಯದ ಸೊಸೆ ನಮ್ಮೂರಿನ ಮನೆಯ ಮಗಳು ಆಕೆಯ ಬಗ್ಗೆ ಹಗುರವಾಗಿ ಮಾತನಾಡಿದರೆ ಮುಂದಿನ ದಿನದಲ್ಲಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸುವ ಮೂಲಕ ಈ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಅಭಿಮಾನಿಗಳು ಎಚ್ಚರಿಕೆಯನ್ನು ನೀಡಿದ್ರು.
ಇದೇ ವೇಳೆ ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಉಪೇಂದ್ರ ಬೆಂಗಳೂರಿನಿಂದ ಮಳವಳ್ಳಿಗೆ ತೆರಳುತ್ತಿದ್ದರು ಈ ವೇಳೆ ಪ್ರತಿಭಟನಾ ನಿರತರು ಉಪೇಂದ್ರ ಅವರನ್ನು ಸುತ್ತುವರಿದು ಚಿತ್ರರಂಗದ ಒಬ್ಬ ಮಹಿಳೆ ಮೇಲೆ ಅವಹೇಳನಕಾರಿ ಹೇಳಿಕೆ ನೀಡಿ ಅವಮಾನಿಸುತಿದ್ದಾರೆ ಇದಕ್ಕೆ ಪ್ರತಿಕ್ರಿಯಿಸಿ ಎಂದು ಉಪೇಂದ್ರ ಅವರನ್ನು ಒತ್ತಾಯಿಸಿದಾಗ ಈ ಪ್ರತಿಭಟನೆಯ ಬಿಸಿ ಉಪೇಂದ್ರ ಅವರಿಗೂ ತಟ್ಟಿತು.
ಇದಕ್ಕೆ ಪ್ರತಿಕ್ರಯಿಸಿದ ಉಪ್ಪಿ ಪ್ರಜಾಕೀಯ ಪಕ್ಷದಿಂದ ನಮ್ಮ ಅಭ್ಯರ್ಥಿ ಸ್ಪರ್ಧಿಸಿದ್ದು, ಅವರನ್ನು ಬೆಂಬಲಿಸಿ, ಮಂಡ್ಯ ಜಿಲ್ಲೆಯ ಜನ ಬುದ್ಧಿವಂತರು. ಈ ಚುನಾವಣೆಯಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುತ್ತಾ ತಮ್ಮ ಬುದ್ಧಿವಂತಿಕೆ ಮಾತು ಹೇಳಿ ಅಲ್ಲಿಂದ ತೆರಳಿದರು.