ಜೆಡಿಎಸ್ ಹಾಗು ಕಾಂಗ್ರೆಸ್ ಮಧ್ಯೆ ಈಗಾಗಲೇ ಬಿರುಕು ಮೂಡಿದ್ಎ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹಿಡಿತದಲ್ಲಿ ಇಟ್ಟುಕೊಳ್ಳಬೇಕಾದರೆ ಜೆಡಿಎಸ್ ಜತೆಗಿನ ಮೈತ್ರಿ ಸೂಕ್ತ ಮಾರ್ಗ ಎಂದು ಮೂಲ ಕಾಂಗ್ರೆಸಿಗರು ಯೋಜನೆ ರೂಪಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಹಳೆ ದೋಸ್ತಿಗಳ ನಡುವೆ ಮುಸುಕಿನ ಗುದ್ದಾಟ ಹೆಚ್ಚಾಗಿರುವುದರಿಂದ ಈಗ ಉಪ ಚುನಾವಣೆಯಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕರು ಪರಸ್ಪರ ಎದುರಾಳಿಗಳಾಗಿ ಸೆಣೆಸಲಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ಹೆಚ್ಚು ಪ್ರಾಬಲ್ಯ ಇಲ್ಲದೇ ಇರುವುದರಿಂದ ಈ ನಾಲ್ಕು ಕ್ಷೇತ್ರಗಳನ್ನು ಜೆಡಿಎಸ್ ಗಂಭೀರವಾಗಿ ಪರಿಗಣಿಸಿದೆ. ಉಳಿದಂತೆ 11 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗೆ ಸಹಾಯವಾಗುವಂತೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಹೇಳಲಾಗುತ್ತಿದೆ.