ಕೆ.ಆರ್. ಪೇಟೆ ಕ್ಷೇತ್ರದಿಂದ ಅನರ್ಹ ಶಾಸಕ ನಾರಾಯಣ ಗೌಡ ಬಿಜೆಪಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ನಿಂದ ಕೆ.ಬಿ. ಚಂದ್ರಶೇಖರ್ ಕಣಕ್ಕಿಳಿದಿದ್ದಾರೆ. ಈ ಇಬ್ಬರೂ ಅಭ್ಯರ್ಥಿಗಳು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ತಮ್ಮನ್ನು ಬೆಂಬಲಿಸಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಮಲತಾ ಅಂಬರೀಶ್ ವಿರುದ್ಧವಾಗಿ ಅಂದು ಜೆಡಿಎಸ್ ಶಾಸಕರಾಗಿದ್ದ ನಾರಾಯಣ ಗೌಡ ಪ್ರಚಾರ ಕಾರ್ಯ ನಡೆಸಿದ್ದು, ಕಾಂಗ್ರೆಸ್ ನಾಯಕರು ಪರೋಕ್ಷವಾಗಿ ಸುಮಲತಾ ಪರ ಪ್ರಚಾರ ನಡೆಸಿದ್ದರು. ಆದರೆ ಉಪ ಚುನಾವಣೆಯಲ್ಲಿ ಸುಮಲತ ಯಾರ ಪರ ಪ್ರಚಾರ ಮಾಡ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಕಾಡ್ತಾ ಇದೆ .