ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ
ಬೆಳಗಾವಿ: ಪ್ರತಿವರ್ಷದಂತೆ ಈ ಬಾರಿ ಕೂಡ ಮಾಬುಸುಬಾನಿ ದರ್ಗಾ ಉರುಸ್ ಮೆರವಣಿಗೆ ಆಯೋಜಿಸಲಾಗಿತ್ತು. ಆದರೆ ಈ ಬಾರಿ ಮೆರವಣಿಗೆ ಖಡಕ್ ಗಲ್ಲಿ ಮಾರ್ಗವಾಗಿ ಸಾಗಿದ ಸಂದರ್ಭದಲ್ಲಿ ಉದ್ವಿಗ್ನತೆ ಉಂಟಾಗಿದೆ.
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಕೆಲ ಯುವಕರು ‘ಐ ಲವ್ ಮೊಹಮ್ಮದ್’ ಘೋಷಣೆ ಕೂಗಿದ್ದು, ಇದರಿಂದ ಸ್ಥಳೀಯ ಹಿಂದೂಗಳು ಅಸಮಾಧಾನ ವ್ಯಕ್ತಪಡಿಸಿದರು. ನಂತರ ಕೆಲವರು ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ, ತಲ್ವಾರ್ ಪ್ರದರ್ಶಿಸಿ ಗೂಂಡಾವರ್ತನೆ ತೋರಿದರೆಂಬ ಆರೋಪಗಳು ಕೇಳಿಬಂದಿವೆ.
ಸಾಮಾನ್ಯವಾಗಿ ಮೆರವಣಿಗೆ ಜಾಲ್ಗಾರ ಗಲ್ಲಿ ಹಾಗೂ ಶನಿವಾರ ಕೂಟ ಗಲ್ಲಿ ಮೂಲಕ ಸಾಗುತ್ತಿದ್ದರೂ, ಈ ಬಾರಿ ಪೊಲೀಸರ ಅನುಮತಿ ಇಲ್ಲದೆ ಮರಾಠಿ ಸಮುದಾಯದವರೇ ಹೆಚ್ಚಿರುವ ಖಡಕ್ ಗಲ್ಲಿಯ ಮೂಲಕ ನಡೆಸಲಾಗಿದೆ. ಇದೂ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಮತ್ತು ಡಿಸಿಪಿ ನಾರಾಯಣ ಭರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಲ್ಲುತೂರಾಟ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸದ್ಯ ಪ್ರದೇಶದಲ್ಲಿ ಕೆಎಸ್‌ಆರ್‌ಪಿ ಪಡೆ ನಿಯೋಜನೆ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ.