ಮಹೇಂದ್ರ ಸಿಂಗ್ ಧೋನಿ ಎಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಕ್ರಿಕೇಟ್ ಪ್ರೇಮಿಗಳಿಗೆ ಅವರು ಆರಾಧ್ಯ ದೈವ ಇದ್ದಂತೆ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಧೋನಿ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ ಇದೆ ಎಂದು ಹೇಳಲಾಗುತ್ತಿದೆ .
ನ್ಯೂಜಿಲೆಂಡ್ ಪ್ರವಾಸಕ್ಕಾಗಿ ತಂಡದ ಆಯ್ಕೆಯಲ್ಲಿ ಎಲ್ಲರ ಕಣ್ಣು ಎಂಎಸ್ ಧೋನಿ ಮೇಲಿದೆ. ಏಕೆಂದರೆ ಧೋನಿ ಇಂದು ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಕೆಲವು ದಿನಗಳ ಹಿಂದೆ ಭಾರತದ ಅನುಭವಿ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಧೋನಿ ಶೀಘ್ರದಲ್ಲೇ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಲಿದ್ದಾರೆಂದು ಭಾರತದ ಕೋಚ್ ರವಿಶಾಸ್ತ್ರಿ ಹೇಳಿದ್ದರು.