ಎಚ್.ಎಸ್.ದೊರೆಸ್ವಾಮಿ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿಯವರದ್ದು ಬಹುಮುಖಿ ವ್ಯಕ್ತಿತ್ವ. ದೇಶದ ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಇತ್ತೀಚಿನವರೆಗೂ ಅವರು ಕೈಗೊಂಡ ಜನಪರ ಹೋರಾಟದವರೆಗೂ ಸಾಗಿದ ಅವರ ಸುದೀರ್ಘ ಬದುಕು ಅಪೂರ್ವವಾದುದು.
ಮಹಾತ್ಮಾ ಗಾಂಧಿಯವರ ಅನುಯಾಯಿಯಾಗಿ , ಅವರ ಚಿಂತನೆಗಳ ಹಾದಿಯಲ್ಲಿಯೇ ನಡೆದವರು. ನಮ್ಮ ನಡುವೆ ಇದ್ದ ಮಹಾತ್ಮ ಗಾಂಧಿಯವರ ಕೊನೆಯ ಕೊಂಡಿಯಂತಿದ್ದರು. ಕರ್ನಾಟಕ ಏಕೀಕರಣಕ್ಕಾಗಿಯೂ ದುಡಿದ ಅವರು ಸರಳತೆ,ಸಜ್ಜನಿಕೆಯ ಸಾಕಾರ ಮೂರ್ತಿಯಾಗಿ, ಕರ್ನಾಟಕದ ಸಾಕ್ಷಿಪ್ರಜ್ಞೆಯಂತಿದ್ದರು.
ಅವರ ನಿಧನದಿಂದಾಗಿ ಅಪ್ರತಿಮ ಹೋರಾಟಗಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.