ಎಡಗೈ ಸಮುದಾಯದವರ 35 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ: ಮುಖ್ಯಮಂತ್ರಿ ಚಂದ್ರು!

Date:

ಎಡಗೈ ಸಮುದಾಯದವರ 35 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ: ಮುಖ್ಯಮಂತ್ರಿ ಚಂದ್ರು!

ಬೆಂಗಳೂರು:-ಒಳಮೀಸಲಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಒಳಗೆ ಒಳಮೀಸಲಾತಿ ಕಲ್ಪಿಸಬೇಕು ಎಂಬ ಎಡಗೈ ಸಮುದಾಯದವರ 35 ವರ್ಷಗಳ ಹೋರಾಟಕ್ಕೆ ಕಡೆಗೂ ಜಯ ಸಿಕ್ಕಿದ್ದು, ಮಂತ್ರಿಮಂಡಲ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ಸಂಗತಿ.

ಈ ಮೂಲಕ ಎಲ್ಲಾ ಹೋರಾಟಗಾರರಿಗೂ ಪಕ್ಷದ ವತಿಯಿಂದ ಅಭಿನಂದನೆ. ನ್ಯಾ. ಸದಾಶಿವ ವರದಿ ಆಯೋಗವನ್ನು ಯಥಾವತ್ತಾಗಿ ಅಳವಡಿಸದ ಕಾರಣದಿಂದ ಅಲೆಮಾರಿ ಹಾಗೂ ಇನ್ನಿತರ ಧ್ವನಿ ಇಲ್ಲದ ಸಣ್ಣ ಸಣ್ಣ ಜಾತಿಗಳಿಗೆ ಒಳಮೀಸಲಾತಿಯ ಲಾಭ ದಕ್ಕುವುದಿಲ್ಲವೆಂಬ ಭಾವನೆಯೂ ಸಹ ಇದೆ ಎಂದು ತಿಳಿಸಿದರು.

ಮುಂಬರುವ ದಿನಗಳಲ್ಲಿ ಬಾಕಿ ಇರುವ ಎಲ್ಲ ನೇಮಕಾತಿಗಳು, ಮುಂಬಡ್ತಿಗಳು ವೇಗದಲ್ಲಿ ಆಗಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡಗಳು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸಬಲೀಕರಣಗೊಳ್ಳಲು ಸರ್ಕಾರವು ಪರಿಶಿಷ್ಟರಿಗೆ ಮೀಸಲಿಟ್ಟಿರುವ ಹಣವನ್ನು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಆಮೂಲಾಗ್ರವಾಗಿ ಬದಲಾವಣೆಗಳನ್ನು ತರಲು ಬಳಸಬೇಕಿದೆ ಎಂದು ಒತ್ತಾಯಿಸಿದರು.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...