ಎತ್ತಿನ ಬಂಡಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ 3 ಯುವಕರ ದಾರುಣ ಸಾವು

tnit editors
0 Min Read

ಎತ್ತಿನ ಬಂಡಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ 3 ಯುವಕರ ದಾರುಣ ಸಾವು

ಹಾವೇರಿ: ಎತ್ತಿನಬಂಡಿಗೆ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ನಡೆದಿದೆ. ಶಶಿಕುಮಾರ್ (25), ಆಕಾಶ್ (23), ದರ್ಶನ್ (23) ಮೃತ ದುರ್ದೈವಿಗಳಾಗಿದ್ದು,
ಮೂವರು ಹನುಮನಮಟ್ಟಿ ಗ್ರಾಮದಿಂದ ಮೈಲಾರ ಜಾತ್ರೆಗೆ ಹೊರಟಿದ್ದಾಗ ಅಪಘಾತ ಸಂಭವಿಸಿದೆ. ಆಕಾಶ್ ಮತ್ತು ದರ್ಶನ್ ಅಂತಿಮ ವರ್ಷದ ಬಿಎಸ್ಸಿ ಓದುತ್ತಿದ್ದರು. ಶಶಿಕುಮಾರ್ ಹನುಮನಮಟ್ಟಿ ಗ್ರಾಮದಲ್ಲಿನ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article