ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಭಾರಿ ವಿರೋಧ ವೆಕ್ತವಾಗುತ್ತಿದೆ ಇದೆ ಸಂದರ್ಭದಲ್ಲಿ ರಾಜಕೀಯ ವಲಯದಲ್ಲಿ ಒಬ್ಬರಮೇಲೊಬ್ಬರು ಕೆಸರಿ ಎರಚಾಟಮಾಡಿಕೊಳ್ಳುತ್ತಿದ್ದಾರೆ ಇದೀಗ ಈ ವಿಚಾರದಲ್ಲಿ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ. “ಎದೆ ಸೀಳಿದರೆ ನಾಲ್ಕು ಅಕ್ಷರ ಇಲ್ಲದವರು, ಬೀದಿಬದಿ ಪಂಕ್ಚರ್ ಹಾಕುವವರು ಮಾತ್ರ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ” ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿವಾದಿತ ಹೇಳಿಕೆ ನೀಡಿದ್ದಾರೆ.
ಪಾಕಿಸ್ತಾನ, ಬಾಂಗ್ಲಾ, ಅಫ್ಘಾನಿಸ್ತಾನದಿಂದ ನುಸುಳುಕೋರರಾಗಿ ಬಂದಿರುವ ಮುಸ್ಲಿಮರಿಗೆ ಭಾರತದ ಪೌರತ್ವ ನೀಡುವ ಪ್ರಶ್ನೆ ಇಲ್ಲ. ಯಾರ ಪರವಾಗಿ ಪ್ರತಿಭಟನೆಗಳು ನಡೆಯುತ್ತವೆ. ಈ ಮಸೂದೆಯಂತೆ ಭಾರತದಲ್ಲಿ ನೆಲೆಸಿರುವ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ. ಹೀಗಿದ್ದರೂ ಅವರು ರಸ್ತೆಗೆ ಇಳಿದು ಪ್ರತಿಭಟನೆ ಯಾಕಾಗಿ ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಸಹಜವಾಗಿ ಕಾಡುತ್ತಿದೆ ಎಂದು ಅವರು ಹೇಳಿದ್ದಾರೆ.