ಎಬಿಡಿ ಪ್ರಪೋಸ್ ಮಾಡಿದ್ದ ಭಾರತದ ತಾಣ ಯಾವುದು ಗೊತ್ತಾ?

Date:

ಎಬಿ ಡಿವಿಲಿಯರ್ಸ್ ಮತ್ತು ಪತ್ನಿ ಡೇನಿಯಲ್ ಡಿವಿಲಿಯರ್ಸ್ ಅವರದ್ದು 3 ಮಕ್ಕಳುಳ್ಳ ಮುದ್ದಾದ ಕುಟುಂಬ. ಎಬಿ ಡಿವಿಲಿಯರ್ಸ್ ಭಾರತವನ್ನು ಎಷ್ಟರಮಟ್ಟಿಗೆ ಇಷ್ಟಪಡುತ್ತಾರೆ ಎಂಬುದನ್ನು ನಿಮಗೆ ಬಿಡಿಸಿ ಹೇಳುವ ಅಗತ್ಯವಿಲ್ಲ. ಎಬಿ ಡಿವಿಲಿಯರ್ಸ್ ಭಾರತವನ್ನು ಇಷ್ಟಪಡುವುದಷ್ಟೇ ಅಲ್ಲ ಭಾರತೀಯರು ಸಹ ಎಬಿ ಡಿವಿಲಿಯರ್ಸ್ ಅವರನ್ನು ಗೌರವ ಮತ್ತು ಪ್ರೀತಿಯಿಂದ ನೋಡುತ್ತಾರೆ.

 

ಅದರಲ್ಲಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಎಬಿ ಡಿವಿಲಿಯರ್ಸ್ ಅಚ್ಚುಮೆಚ್ಚಿನ ಆಟಗಾರ. ಭಾರತದಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ಎಬಿ ಡಿವಿಲಿಯರ್ಸ್ ಅವರ ಕುರಿತು ಪತ್ನಿ ಡೇನಿಯಲ್ ಡಿವಿಲಿಯರ್ಸ್ ಅವರು ವಿಶೇಷ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಡೇನಿಯಲ್ ಡಿವಿಲಿಯರ್ಸ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯ ಸ್ಟೋರಿಯಲ್ಲಿ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು ಎಬಿಡಿ ಯಾವ ಸ್ಥಳದಲ್ಲಿ ಪ್ರಪೋಸ್ ಮಾಡಿದರು ಎಂಬುದನ್ನು ಬಿಚ್ಚಿಟ್ಟಿದ್ದಾರೆ.

 

 

ಅಭಿಮಾನಿಯೊಬ್ಬರು ನಿಮ್ಮದು ಲವ್ ಮ್ಯಾರೇಜಾ ಅಥವಾ ಅರೇಂಜ್ಡ್ ಮ್ಯಾರೇಜಾ? ಲವ್ ಮ್ಯಾರೇಜ್ ಆಗಿದ್ದರೆ ಎಬಿಡಿ ನಿಮಗೆ ಮೊದಲು ಎಲ್ಲಿ ಪ್ರೇಮ ನಿವೇದನೆ ಮಾಡಿದರು ಎಂದು ಪ್ರಶ್ನೆ ಕೇಳಿದ್ದಾರೆ, ಅದಕ್ಕೆ ಉತ್ತರಿಸಿರುವ ಡೇನಿಯಲ್ ಡಿವಿಲಿಯರ್ಸ್ ಈ ತರಹದ ಪ್ರಶ್ನೆಗಳು ತುಂಬಾ ಬಾರಿ ನನಗೆ ಬಂದಿವೆ, ನಮ್ಮದು ಲವ್ ಮ್ಯಾರೇಜ್, ಎಬಿ ಡಿವಿಲಿಯರ್ಸ್ ನನಗೆ ಭಾರತದ ಆಗ್ರಾದಲ್ಲಿರುವ ತಾಜ್ ಮಹಲ್‌ನಲ್ಲಿ ಪ್ರಪೋಸ್ ಮಾಡಿದರು ಎಂದು ಹೇಳಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...