ಎರಡನೇ ಮಗುವಿನ ತಂದೆಯಾದ ಯದುವೀರ್ ಒಡೆಯರ್! ಅರಮನೆಯಲ್ಲಿ ಹೆಚ್ಚಿದ ಸಂಭ್ರಮ
ಮೈಸೂರು: ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನವರಾತ್ರಿಯ 9 ದಿನವಾದ ಇಂದು ಅರಮನೆಯಲ್ಲಿ ಸಂಭ್ರಮ ಹೆಚ್ಚು ಮಾಡಿದೆ. ರಾಜವಂಶಸ್ಥ ಯದುವೀರ್ ಒಡೆಯರ್ ಅವರ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಅವರು 2ನೇ ಮಗುವಿಗೆ ಜನ್ಮ ನೀಡಿದ್ದಾರೆ. ಅರಮನೆಯಲ್ಲಿ ಆಯುಧಪೂಜೆಯ ಕೈಂಕರ್ಯಗಳು ನೆರವೇರುತ್ತಲೇ ಇವೆ. ಇದರ ಬೆನ್ನಲ್ಲೇ ಸಂಸದ ಹಾಗೂ ರಾಜವಂಶಸ್ಥ ಯದುವೀರ್‌ಗೆ 2ನೇ ಮಗುವಿನ ಜನನವಾಗಿದೆ.
ಯದುವೀರ್ ಅವರು ಖಾಸಗಿ ದರ್ಬಾರ್ ಚಟುವಟಿಕೆಗಳಲ್ಲಿ ಒಂದು ವಾರದಿಂದ ಭಾಗಿಯಾಗಿದ್ದು. ಶುಕ್ರವಾರ ಆಯುಧಪೂಜೆ ಸಂಭ್ರಮದಲ್ಲಿದ್ದರು. ಈ ವೇಳೆ ಖುಷಿಯ ವಿಚಾರ ಬಂದಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ಆಗಿದ್ದು, ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.