ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೋನ್ ಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಜನತೆ!

tnit editors
1 Min Read

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೋನ್ ಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಜನತೆ!

ಬೆಂಗಳೂರು:- ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಜನತೆ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.

ಲಕ್ಷಾಂತರ ಮಂದಿ ಐಟಿ ಉದ್ಯೋಗಿಗಳು ಕೆಲಸ ಮಾಡುವ ಕೈಗಾರಿಕಾ ಪ್ರದೇಶವಾದ ಇಂತಹ ಕಡೆ ಚಿರತೆ ಓಡಾಟಕ್ಕೆ ಜನ ಬೆಚ್ಚಿಬಿದ್ದಿದ್ದರು. ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ಟ್ರ್ಯಾಪ್ ಮಾಡಿ ಮೂರು ಬೋನ್ ಗಳನ್ನ ಇಟ್ಟು ಚಿರತೆ ಸೆರೆ ಹಿಡಿದಿದ್ದಾರೆ. ಈ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಶಿಫ್ಟ್ ಮಾಡಲು ಸಿದ್ದತೆ ನಡೆಯುತ್ತಿದೆ.

ಕೆಲ ದಿನಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಮೊದಲನೇ ಹಂತದಲ್ಲಿ ಚಿರತೆ ಓಡಾಡಿಕೊಂಡಿತ್ತು. ರಸ್ತೆ ದಾಟಿ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದು ಜನರಲ್ಲಿ ಆತಂಕ ಸೃಷ್ಟಿಸಿತ್ತು. ಲಕ್ಷಾಂತರ ಮಂದಿ ಐಟಿ ಉದ್ಯೋಗಿಗಳು ಕೆಲಸ ಮಾಡುವ ಕೈಗಾರಿಕಾ ಪ್ರದೇಶವಾದ ಇಂತಹ ಕಡೆ ಚಿರತೆ ಓಡಾಟಕ್ಕೆ ಜನ ಬೆಚ್ಚಿಬಿದ್ದಿದ್ದರು ಇದೀಗ ಚಿರತೆ ಸೆರೆಯಿಂದಾಗಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

Share This Article