No menu items!
13.7 C
Munich
Wednesday, May 20, 2026

ಎಲೆಕ್ಷನ್ ಆದ ಬಳಿಕ ಮಹಾರಾಷ್ಟ್ರ ಸರ್ಕಾರ ಉಳಿಯುತ್ತಾ ಎಂಬ ಅನುಮಾನ !

Must read

ಬೆಂಗಳೂರು: ಎಲೆಕ್ಷನ್ ಆದ ಬಳಿಕ ರಾಜ್ಯದಲ್ಲಿ ಯಾವುದೇ ಭಯವಿಲ್ಲ. ಮಹಾರಾಷ್ಟ್ರ ಸರ್ಕಾರ ಉಳಿಯುತ್ತಾ ಎಂಬ ಅನುಮಾನವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಏಕನಾಥ ಶಿಂಧೆಗೆ ಟಾಂಗ್ ನೀಡಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗುತ್ತೆ ಎಂಬ ಏಕನಾಥ ಶಿಂಧೆ ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಸರ್ಕಾರದ ಬಗ್ಗೆ ಅವರಿಗೆ ಅನಮಾನವಿದೆ. ಎಲೆಕ್ಷನ್ ಆದ ಬಳಿಕ ರಾಜ್ಯದಲ್ಲಿ ಯಾವುದೇ ಭಯವಿಲ್ಲ. ಮಹಾರಾಷ್ಟ್ರ ಸರ್ಕಾರ ಉಳಿಯುತ್ತಾ ಎಂಬ ಅನುಮಾನವಿದೆ.
ಅಲ್ಲಿ ಶಾಸಕರು ಯೂಟರ್ನ್ ಹೊಡೆಯುತ್ತಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಅಲ್ಲಿ ನಮ್ಮ ಪಕ್ಷದ ಸರ್ಕಾರ ಬರಲಿದೆ. ಅಲ್ಲಿ ಮೈತ್ರಿ ಸರ್ಕಾರ ಬರಲಿದೆ. ಎನ್ಸಿಪಿ, ಶಿವಸೇನೆಯ ಶಾಸಕರು ವಾಪಸ್ ಆಗುತ್ತಿದ್ದಾರೆ. ಅದಕ್ಕೆ ಅಲ್ಲಿ ಸರ್ಕಾರ ಬದಲಾವಣೆ ಆಗಲಿದೆ. ನಮ್ಮ ಸರ್ಕಾರದಲ್ಲಿ ಯಾವುದೇ ಶಿಂಧೆ ಇಲ್ಲ. ನಮಗೆ ಯಾವ ಭಯ ಇಲ್ಲ. ಮಹಾರಾಷ್ಟ್ರದಲ್ಲಿ ಪಾರ್ಲಿಮೆಂಟ್ ಚುನಾವಣೆ ಬಳಿಕ ನಮ್ಮ ಸರ್ಕಾರ ಬರುತ್ತೆ ಎಂದರು.

- Advertisement -spot_img

More articles

- Advertisement -spot_img

Latest article