ಎಲ್ಲರ ನಿರೀಕ್ಷೆ ಮೀರಿ‌ ಜನ ಮೈತ್ರಿಗೆ ತೀರ್ಪು ಕೊಡ್ತಾರೆ !

Date:

ಬೆಂಗಳೂರು: ಈ‌ ಬಾರಿ ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಎಲ್ಲರ ನಿರೀಕ್ಷೆ ಮೀರಿ‌ ಜನ ಮೈತ್ರಿಗೆ ತೀರ್ಪು ಕೊಡ್ತಾರೆ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಅವರು ಶ್ರೀರಾಮ ಅಂತಾರೆ. ಉಪವಾಸ, ನದಿ ಸ್ನಾನ ಇವೆಲ್ಲ ಮಾಡ್ತಾರೆ. ಇಲ್ಲಿ ಇವರಿಗೆ ಸಿದ್ದರಾಮ ಮಾತ್ರ.
ಸಿದ್ದರಾಮ ಹೆಸರಿನಲ್ಲಿ NDA ಸೋಲಿಸಿ 20 ಸೀಟು ಗೆಲ್ತೀವಿ ಅನ್ನೋ ಹಿನ್ನೆಲೆಯಲ್ಲಿ ಇವೆಲ್ಲ ಸೃಷ್ಟಿ ಮಾಡ್ತಿದ್ದಾರೆ. 20 ಸೀಟು ಗೆಲ್ಲೋದು ಕನಸು ಮಾಡ್ತಿದ್ದಾರೆ. ಅದೆಲ್ಲ ಕನಸು ಮಾತ್ರ. ಈ‌ ಬಾರಿ ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಎಲ್ಲರ ನಿರೀಕ್ಷೆ ಮೀರಿ‌ ಜನ ಮೈತ್ರಿಗೆ ತೀರ್ಪು ಕೊಡ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಇನ್ನೂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್‌ ಅಂತ್ಯ ಕಾಣುತ್ತದೆ ಎಂದು ಭವಿಷ್ಯ ನುಡಿದರು. 60 ವರ್ಷ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನನಗೆ ಇವರು ಹೇಳ್ತಾರೆ. ಇವತ್ತು ಹೇಳ್ತೀನಿ ಕರ್ನಾಟಕದಲ್ಲಿ ಇವರು ಅಂತ್ಯ ಕಾಣ್ತಾರೆ. ನಾವು ಸೋಲಿಸಿಯೇ ಸೋಲಿಸ್ತೀವಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ಅಂತ್ಯ ಕಾಣುತ್ತೆ ಎಂದರು.

Share post:

Subscribe

spot_imgspot_img

Popular

More like this
Related

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...