ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಪ್ರಯೋಜನ

Date:

ನವದೆಹಲಿ: ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಪ್ರಯೋಜನಗಳ ವಿಸ್ತರಿಸಣೆ ಮಾಡಲಾಗುತ್ತದೆ. ಬಾಡಿಗೆ ಮನೆಗಳು, ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸ ಮನೆಯನ್ನು ಖರೀದಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ನೆರವು ನೀಡಲಾಗುತ್ತದೆ ಎಂದು ತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ-ಜನ ಆರೋಗ್ಯ ಯೋಜನೆ (AB-PMJAY) ವಿಶ್ವದಲ್ಲೇ ಅತಿ ದೊಡ್ಡ ಸಾರ್ವಜನಿಕ ನಿಧಿಯ ಆರೋಗ್ಯ ವಿಮಾ ಯೋಜನೆಯಾಗಿದ್ದು, ದ್ವಿತೀಯ ಮತ್ತು ತೃತೀಯ ಆರೈಕೆಗಾಗಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ.ಗಳನ್ನು ಒದಗಿಸುತ್ತದೆ. ಕಳೆದ ವರ್ಷ ಡಿಸೆಂಬರ್ 27ರವರೆಗೆ 12 ಕೋಟಿ ಕುಟುಂಬಗಳಿಗೆ ಸೇರಿದ 55 ಕೋಟಿ ಜನ ಈ ಯೋಜನೆಗೆ ಒಳಪಟ್ಟಿದ್ದರು.
ಭಾರತೀಯ ಆರ್ಥಿಕತೆ ಕಳೆದ ಒಂದು ದಶಕದಲ್ಲಿ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ. 2014ರಿಂದ ಭಾರತ ದೈತ್ಯ ಸವಾಲುಗಳನ್ನು ಎದುರಿಸಿತ್ತು. ಆದರೆ ಸರ್ಕಾರ ಈ ಅಡೆತಡೆಗಳನ್ನು ನಿವಾರಿಸಿದೆ ಮತ್ತು ರಚನಾತ್ಮಕ ಸುಧಾರಣೆಗಳನ್ನು ಪ್ರಾರಂಭಿಸಿದೆ. ಜನಪರ ಸುಧಾರಣೆಗಳಿಗೆ ಒತ್ತು ನೀಡಲಾಗಿದೆ. ಉದ್ಯೋಗ ಸೃಷ್ಟಿ ಮತ್ತು ಉದ್ಯಮಶೀಲತೆಗಳನ್ನು ಉತ್ತೇಜಿಸಲಾಗಿದೆ. ಅಭಿವೃದ್ಧಿ ಉಪಕ್ರಮಗಳು ಬೃಹತ್ ಪ್ರಮಾಣದಲ್ಲಿ ಜನರನ್ನು ತಲುಪಿವೆ ಎಂದು ನಿರ್ಮಲಾ ನುಡಿದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...