ಎಲ್ಲಾ ಕ್ಷೇತ್ರದಲ್ಲೂ ನಮಗೆ ಮುನ್ನಡೆ: ಡಿಸಿಎಂ ಡಿ.ಕೆ ಶಿವಕುಮಾರ್

0
16

ಬೆಂಗಳೂರು: ನಮಗೆ ಪ್ರತಿ ಬಾರಿ ಹಿನ್ನಡೆಯಾಗುತ್ತಿದ್ದ ಬೆಂಗಳೂರು ದಕ್ಷಿಣದಲ್ಲೂ ಈ ಬಾರಿ ನಮಗೆ ಮುನ್ನಡೆ ಸಿಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಮಗೆ ಪ್ರತಿ ಬಾರಿ ಹಿನ್ನಡೆಯಾಗುತ್ತಿದ್ದ ಬೆಂಗಳೂರು ದಕ್ಷಿಣದಲ್ಲೂ ಈ ಬಾರಿ ನಮಗೆ ಮುನ್ನಡೆ ಸಿಗುತ್ತಿದೆ. ಅದರ ಜತೆ ರಾಜರಾಜೇಶ್ವರಿ ನಗರ, ಆನೇಕಲ್ ನಲ್ಲೂ ನಮಗೆ ಲೀಡ್ ಬರಲಿದೆ. ಎಲ್ಲೂ ಮೋದಿ ಗಾಳಿ ಇಲ್ಲ. ಕುಮಾರಸ್ವಾಮಿ ಅವರು ದೆಹಲಿಯಿಂದ ಒಂದು ದಿನ ಬಂದು ಬಿಜೆಪಿ ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದರು. ಮರುದಿನ ನನ್ನ ಮೇಲೆ ಟೀಕೆ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯವರು ಸಿಎಂ ಆಗಲಿ ಎಂದು ಬೆಂಬಲ ನೀಡಿದರೆ, ನಾನೇ ವಿಷ ಹಾಕಿದ್ದೇನೆ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ. ನಮ್ಮ ಕಾರ್ಯಕರ್ತರ ವಿರೋಧದ ನಡುವೆ ಅವರಿಗೆ ಬೆಂಬಲ ಕೊಟ್ಟಿದ್ದೆ ಎಂದರು.
ಇನ್ನೂ ಈ ಚುನಾವಣೆಯನ್ನು ದೇಶವೇ ನೋಡುತ್ತಿದೆ. ಆದರೂ ನೀವು ತಲೆ ಕೆಡಿಸಿಕೊಳ್ಳಬೇಡಿ. 2013ರಲ್ಲಿ ಉಪಚುನಾವಣೆ ಎದುರಾದಾಗ ನಾನು ಮಂತ್ರಿಯಾಗಿರಲಿಲ್ಲ. ಆಗ ನಮ್ಮ ಕೇವಲ 3 ಶಾಸಕರೂ ಇದ್ದರೂ ಉಪಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸ್ಪರ್ಧೆ ಮಾಡಿದಾಗ ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು ನಿಲ್ಲಿಸಿದರು. ಅವರಿಬ್ಬರೂ ಸೇರಿ 2.50 ಲಕ್ಷ ಮತಗಳ ಮುನ್ನಡೆಯಲ್ಲಿದ್ದರು. ಆದರೂ ಸುರೇಶ್ 1.50 ಲಕ್ಷ ಮತಗಳ ಅಂತರದಿಂದ ಗೆದ್ದರು. ಇಂದೂ ಅದೇ ಪರಿಸ್ಥಿತಿ ಇದೆ ಎಂದು ಹೇಳಿದರು.