ಎಲ್ಲಿದೆ ಸ್ವಾಮಿ ಲಸಿಕೆ; ಆಸ್ಪತ್ರೆಯಲ್ಲೇ ಗಲಾಟೆ

Date:

ನಗರದಲ್ಲಿ ಲಸಿಕೆ ಕೊರತೆ ಸಮಸ್ಯೆ ಮುಂದುವರಿದಿದೆ. ನಗರದ ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ಜನರು ಕೋವಿಡ್‌ ಲಸಿಕೆಗಾಗಿ ಮುಗಿ ಬಿದ್ದಿದ್ದಾರೆ.
ಜುಲೈ 11 ರ ಭಾನುವಾರದಂದು ಬೆಳಿಗ್ಗೆ 6:30 ಗಂಟೆಗೆಯೇ ಜನರು ಕೋವಿಡ್‌ ಲಸಿಕೆಗಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ಹಾಗೆಯೇ ಭಾನುವಾರವಾದ ಕಾರಣ ಕೋವಿಡ್‌ ಲಸಿಕೆಗಾಗಿ ನೂಕು ನುಗ್ಗಲು ಏರ್ಪಟ್ಟಿದೆ.


ಕೊರೊನಾ ಲಸಿಕೆ ಪಡೆಯಲು ಹತ್ತು ಗಂಟೆಗೆ ಟೋಕನ್‌ ನೀಡಲಾಗುವುದು ಎಂದು ಆಸ್ಪತ್ರೆಯ ಸಿಬ್ಬಂದಿಗಳು ಜನರಿಗೆ ತಿಳಿಸಿದ್ದಾರೆ. ಆದರೆ ಜನರು ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕೆ.ಸಿ.ಜನರಲ್‌ ಆಸ್ಪತ್ರೆ ಬಳಿ ಮುಂದುವರೆದ ವ್ಯಾಕ್ಸಿನ್‌ ಗಲಾಟೆ…
ಹಾಗೆಯೇ ಟೋಕನ್‌ ಪಡೆದವರಿಗೆ ಮಾತ್ರ ಕೋವಿಡ್‌ ಲಸಿಕೆ ದೊರೆಯುತ್ತದೆ ಎಂದು ಹೇಳಿದ ಕಾರಣ, ಬೆಳಿಗ್ಗೆ 6:30 ಗಂಟೆಯಿಂದಲೇ ಕಾಯುತ್ತಿದ್ದ ಜನರು ಟೋಕನ್‌ ಪಡೆಯಲು ಮುಗಿಬಿದ್ದಿದ್ದಾರೆ.


ಇನ್ನು ಈಗಾಗಲೇ ಟೋಕನ್‌ ವಿತರಣೆ ಮಾಡಲಾಗಿದೆ ಎಂದು ಆಸ್ಪತ್ರೆಯ ಸಿಬ್ಬಂದಿಗಳು ಹೇಳಿದ್ದು, ಇಂದು ಯಾಕೆ ಟೋಕನ್‌ ಕೊಡುತ್ತಿಲ್ಲ ಎಂದು ಜನರು ಆಕ್ರೋಶಿತರಾಗಿದ್ದಾರೆ.
ಪರಿಸ್ಥಿತಿ ಹದಗೆಡುತ್ತಿದ್ದಂತೆ ಮಲ್ಲೇಶ್ವರಂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಹಾಗೂ ಜನರ ನಡುವೆ ವಾಗ್ವಾದ ನಡೆದಿದೆ.
ದೇಶದಲ್ಲಿ ಕೊರೊನಾ ಮೂರನೇ ಅಲೆಯ ಎದುರು ನೋಡುತ್ತಿರುವ ಈ ಸಂದರ್ಭದಲ್ಲಿ ಕೊರೊನಾ ಲಸಿಕೆ ನೀಡುವುದು ಅತೀ ಮುಖ್ಯವಾಗಿದೆ. ಕೊರೊನಾ ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಳವಾಗಿದ್ದರೂ ಡಿಸೆಂಬರ್‌ನ ಒಳಗೆ ಎಲ್ಲರಿಗೂ ಲಸಿಕೆ ನೀಡಬೇಕಾದರೆ ವೇಗ ಇನ್ನಷ್ಟು ಹೆಚ್ಚಬೇಕಾಗಿದೆ. ಈ ನಡುವೆ ಹಲವಾರು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ ಕಾಣಿಸಿಕೊಂಡಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...