ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಮತ್ತಿತರರನ್ನು ಭೇಟಿ ಮಾಡಿದ ವೇಳೆ ಪ್ರತಿಯೊಂದು ವಿಷಯಕ್ಕೂ ನೀವು ದೆಹಲಿಗೆ ಬಂದರೆ ರಾಜ್ಯದ ಜನತೆಗೆ ತಪ್ಪು ಸಂದೇಶ ರವಾನೆಯಾಗುತ್ತದೆ.
ಸಂಪುಟ ವಿಸ್ತರಣೆ ಮಾಡುವುದು,ಯಾರನ್ನು ತೆಗೆದುಕೊಳ್ಳಬಹುದು, ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಾತಿ ಸೇರಿದಂತೆ ಕೆಲವು ಪ್ರಮುಖ ತೀರ್ಮಾನಗಳನ್ನು ನೀವೇ ತೆಗೆದುಕೊಳ್ಳಿ.
ಇಂತಹ ವಿಷಯಗಳಿಗೆ ದೆಹಲಿಗೆ ಬರುವ ಅಗತ್ಯವಿಲ್ಲ ಎಂದು ಸೂಚ್ಯವಾಗಿ ತಿಳಿಸಿದ್ದಾರೆ.ಮುಖ್ಯಮಂತ್ರಿಯಾಗಿರುವ ನಿಮಗೆ ಪ್ರಮುಖ ತೀರ್ಮಾನ ತೆಗೆದುಕೊಳ್ಳುವ ಸಂಪೂರ್ಣ ಸ್ವತಂತ್ರವಿದೆ. ಆಡಳಿತಾತ್ಮಕವಾಗಿ ಪ್ರಮುಖ ತೀರ್ಮಾನ ಕೈಗೊಳ್ಳುವಾಗ ನಮ್ಮ ಸಲಹೆ ಪಡೆಯಿರಿ. ನಾವು ಅನಗತ್ಯ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ವರಿಷ್ಠರು ಸ್ಪಷ್ಟಪಡಿಸಿದ್ದಾರೆ.