ಎಸ್‌ಬಿಐಗೆ ಒಂದು ಕೋಟಿ ದಂಡ!

Date:

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾಕ್ಕೆ (ಎಸ್‌ಬಿಐ) ರಿಸರ್ವ್ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌ಬಿಐ) ಸೋಮವಾರ ಒಂದು ಕೋಟಿ ರೂಪಾಯಿ ದಂಡವನ್ನು ವಿಧಿಸಿದೆ. ವಂಚನೆ ಸಂಬಂಧಿಸಿದ ನಿಯಮಗಳನ್ನು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಪಾಲನೆ ಮಾಡಿಲ್ಲ ಎಂಬ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್‌ ಆಫ್‌ ಇಂಡಿಯಾ, ಎಸ್‌ಬಿಐಗೆ ದಂಡ ವಿಧಿಸಿದೆ ಎಂದು ವರದಿ ಆಗಿದೆ.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಖಾತೆಗಳ ಬಗ್ಗೆ ತನಿಖೆ ನಡೆಸಲಾಗಿದೆ ಮತ್ತು ವಂಚನೆಗಳ ಬಗ್ಗೆ ಎಸ್‌ಬಿಐ ಬಳಿ ವರದಿ ಮಾಡುವಲ್ಲಿ ಅಡೆತಡೆಗಳು ಇದೆ. ಈ ನಿಟ್ಟಿನಲ್ಲಿ ಎ‌ಸ್‌ಬಿಐಗೆ ದಂಡ ವಿಧಿಸಲಾಗಿದೆ ಎಂದು ನಿಯಂತ್ರಕರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ನಿಯಂತ್ರಕರು, “ರಿಸರ್ವ್ ಬ್ಯಾಂಕ್‌ ಆಫ್‌ ಇಂಡಿಯಾವು ಎಸ್‌ಬಿಐನಲ್ಲಿ ಇರುವ ಗ್ರಾಹಕರ ಖಾತೆಯ ಪರಿಶೀಲನೆ ನಡೆಸಿದೆ. ಈ ಸಂದರ್ಭದಲ್ಲಿ ಕೆಲವು ಅಡೆತಡೆಗಳು ಇರುವುದು ಕಂಡು ಬಂದಿದೆ,” ಎಂದು ಹೇಳಿದ್ದಾರೆ. “ಯಾವುದೇ ವಂಚನೆ ನಡೆದ ಸಂದರ್ಭದಲ್ಲಿ ಆ ಬಗ್ಗೆ ದೂರು ದಾಖಲು ಮಾಡುವಾಗ ಎಸ್‌ಬಿಐನ ಕೆಲವು ಅಡೆತಡೆಗಳಿಂದಾಗಿ ವಿಳಂಬವಾಗುತ್ತದೆ. ಈ ನಿಟ್ಟಿನಲ್ಲಿ ದಂಡ ವಿಧಿಸಲಾಗಿದೆ,” ಎಂದು ಕೂಡಾ ಉಲ್ಲೇಖ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...