ಏಷ್ಯನ್ ಯೂತ್ ಪ್ಯಾರಾ ಗೇಮ್ಸ್‌ನಲ್ಲಿ ಕಂಚು ಗೆದ್ದ ಕನ್ನಡತಿ ಮೇಧಾ

Date:

2021ನೇ ಸಾಲಿನ ಏಷಿಯನ್ ಯೂತ್ ಪ್ಯಾರಾ ಗೇಮ್ಸ್ ಬಹ್ರೇನ್‌ನಲ್ಲಿ ನಡೆಯುತ್ತಿದೆ. ಈ ಪ್ಯಾರಾ ಗೇಮ್ಸ್‌ನಲ್ಲಿ ನಡೆದ ಶಾಟ್‌ಪುಟ್ ವಿಭಾಗದಲ್ಲಿ ಕರ್ನಾಟಕದ ಮೇಧಾ ಜಯಂತ್ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.

ಕರ್ನಾಟಕ ಮೂಲದ ಮೇಧಾ ಜಯಂತ್ ಇದೇ ವರ್ಷ ಚೆನ್ನೈನಲ್ಲಿ ನಡೆದಿದ್ದ ನ್ಯಾಷನಲ್ ಪ್ಯಾರಾ ಗೇಮ್ಸ್‌ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದರು. ಸದ್ಯ ಬಿಎ ಎಲ್ ಎಲ್ ಬಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಮೇಧಾ ಜಯಂತ್ ಹುಟ್ಟಿದಾಗಿನಿಂದಲೂ ಸೆರೆಬ್ರಲ್ ಪಾಲ್ಸಿಯನ್ನು ಹೊಂದಿದ್ದಾರೆ.

 

ಆದರೆ ಸಾಧಿಸುವ ಛಲ ಹೊಂದಿರುವ ಮೇಧಾ ಜಯಂತ್ ಅವರನ್ನು ಈ ನ್ಯೂನತೆಗೂ ತಡೆಯಲು ಆಗಿಲ್ಲ. ತಮ್ಮ ನ್ಯೂನತೆಯ ನಡುವೆಯ ನಡುವೆಯೇ ಬಿಎ ಎಲ್ ಎಲ್ ಬಿ ವ್ಯಾಸಂಗವನ್ನು ಮಾಡುತ್ತಿದ್ದು, ಅದರ ಜೊತೆಗೆ ಶಾಟ್‌ಪುಟ್ ಕ್ರೀಡೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡು ಹಲವಾರು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಕರ್ನಾಟಕದ ಬಾವುಟವನ್ನು ಹಾರಿಸಿ ನಾಡಿಗೆ ಹೆಮ್ಮೆ ತಂದಿದ್ದಾರೆ.

ಸದ್ಯ ಬಹ್ರೇನ್‌ನಲ್ಲಿ ನಡೆಯುತ್ತಿರುವ ಪ್ಯಾರಾ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದಿರುವ ಮೇಧಾ ಜಯಂತ್ ಅವರಿಗೆ ಪ್ಯಾರಾಲಂಪಿಕ್ಸ್ ಇಂಡಿಯಾ ತನ್ನ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಟ್ವೀಟ್ ಮಾಡಿ ಶುಭಾಶಯವನ್ನು ಕೋರಿದೆ.

 

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...