ಐಎಂಎ ಜುವೆಲ್ಲರ್ಸ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ರೋಷನ್ ಬೇಗ್, ಎಸ್‌ಐಟಿ ತನಿಖೆಯಿಂದ ಪ್ರಯೋಜನ ಇಲ್ಲ. ಸಿಬಿಐ ತನಿಖೆಗೆ ವಹಿಸಬೇಕು ಎಂದು ಹೇಳಿದ್ದಾರೆ.
ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದಲ್ಲಿ ಸತ್ಯಾಸತ್ಯತೆ ಬೇಗನೆ ಹೊರಬರುತ್ತದೆ ಎಂದು ಅವರು ಹೇಳಿದ್ದು, ಐಎಂಎ ವಂಚನೆ ಪ್ರಕರಣಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ. ನಾನು ಅವರಿಂದ ಯಾವುದೇ ಹಣ ಪಡೆದುಕೊಂಡಿಲ್ಲ. ನನ್ನ ಪುತ್ರನಾಗಲಿ ಹಣ ಪಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ಐಎಂಎ ಜ್ಯುವೆಲ್ಲರ್ಸ್ ನಲ್ಲಿ ಹೂಡಿಕೆ ಮಾಡಿದ್ದ ಜನ ಆತಂಕದಲ್ಲಿದ್ದಾರೆ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮನ್ಸೂರ್ ಖಾನ್ ಮೊಬೈಲ್ ಫೋನ್ ಕಾಲ್ ಲಿಸ್ಟ್, ವಾಟ್ಸಾಪ್ ಮೆಸೇಜ್ ಗಳನ್ನು ತನಿಖೆಗೆ ಒಳಪಡಿಸಿದರೆ ಗೊತ್ತಾಗುತ್ತದೆ.ಆತ ಎಲ್ಲಿದ್ದಾನೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಿ ಹೂಡಿಕೆದಾರರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಹೇಳಿದ್ದಾರೆ.