ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಶೂನ್ಯ ಸುತ್ತಿದ ಆಟಗಾರರು

Date:

ಏಪ್ರಿಲ್ 10ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಹೀನಾಯ ಸೋಲನ್ನು ಕಂಡಿತ್ತು. ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೋಲುವುದರ ಮೂಲಕ ನಿರಾಶಾದಾಯಕ ಆರಂಭವನ್ನು ಪಡೆದುಕೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಶುಕ್ರವಾರ ( ಏಪ್ರಿಲ್ 16 ) ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವುದರ ಮೂಲಕ ಯಶಸ್ಸಿನ ಹಾದಿಗೆ ಮರಳಿದೆ.

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಪವರ್ ಪ್ಲೇ ಮುಗಿಯುವಷ್ಟರಲ್ಲಿಯೇ ತಂಡದ ಬಹುತೇಕ ಪ್ರಮುಖ ವಿಕೆಟ್‍ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿಕೊಂಡಿತು. ಆರನೇ ಕ್ರಮಾಂಕದಲ್ಲಿ ಬಂದ ಶಾರುಖ್ ಖಾನ್ ಹೊರತುಪಡಿಸಿ ಬೇರೆ ಯಾವ ಆಟಗಾರರೂ ಸಹ ಪಂಜಾಬ್ ಕಿಂಗ್ಸ್ ತಂಡದ ಪರ ಉತ್ತಮ ಪ್ರದರ್ಶನ ನೀಡಲೇ ಇಲ್ಲ. 20 ಓವರ್‌ಗಳಲ್ಲಿ 8 ವಿಕೆಟ್‍ ನಷ್ಟಕ್ಕೆ ಪಂಜಾಬ್ ಕಿಂಗ್ಸ್ 106 ರನ್ ಗಳಿಸಲಷ್ಟೇ ಶಕ್ತವಾಯಿತು.

 

107 ರನ್‌ಗಳ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಫಾಫ್ ಡು ಪ್ಲೆಸಿಸ್ ಮತ್ತು ಮೊಯಿನ್ ಅಲಿ ಭರ್ಜರಿ ಬ್ಯಾಟಿಂಗ್ ನೆರವಿನಿಂದ 15.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಚೆನ್ನೈ ತಂಡ 107 ರನ್‌ಗಳ ಗುರಿ ಮುಟ್ಟಿ 6 ವಿಕೆಟ್‍ಗಳ ಭರ್ಜರಿ ಸಾಧಿಸಿತು. ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವು ಸಾಧಿಸಿತಾದರೂ ಸಹ ಐದನೇ ಕ್ರಮಾಂಕದಲ್ಲಿ ಬಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಅಂಬಟಿ ರಾಯುಡು ಶೂನ್ಯಕ್ಕೆ ಔಟ್ ಆಗುವ ಮೂಲಕ ಕೆಟ್ಟ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹೌದು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಡಕ್ ಔಟ್ ಆದ ಆಟಗಾರರ ಪಟ್ಟಿಯಲ್ಲಿ ಅಂಬಟಿ ರಾಯುಡು 13 ಪಂದ್ಯಗಳಲ್ಲಿ ಡಕ್ ಔಟ್ ಆಗುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ.

 

 

 

ಅಂಬಟಿ ರಾಯುಡು ಹೊರತುಪಡಿಸಿ ಉಳಿದಂತೆ ರೋಹಿತ್ ಶರ್ಮಾ, ಹರ್ಭಜನ್ ಸಿಂಗ್, ಅಜಿಂಕ್ಯಾ ರಹಾನೆ ಹಾಗೂ ಪಾರ್ಥಿವ್ ಪಟೇಲ್ ಸಹ ತಲಾ 13 ಐಪಿಎಲ್ ಪಂದ್ಯಗಳಲ್ಲಿ ಡಕ್ ಔಟ್ ಆಗಿದ್ದು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಔಟ್ ಆದ ಆಟಗಾರರು ಎಂಬ ಕೆಟ್ಟ ದಾಖಲೆಯನ್ನು ಹೊಂದಿದ್ದಾರೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...