ಐಪಿಎಲ್ ಗೆ ಧೋನಿ ವಿದಾಯ?

Date:

ಮಹೇಂದ್ರ ಸಿಂಗ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸ ಕಂಡ ಯಶಸ್ವಿ ನಾಯಕರಲ್ಲೊಬ್ಬರು. ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 3 ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. 2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಾತ್ರ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಪ್ರದರ್ಶನವನ್ನು ನೀಡುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿತ್ತು.

ಕಳೆದ ಆವೃತ್ತಿಯಲ್ಲಿ ನೀಡಿದ ಕಳಪೆ ಪ್ರದರ್ಶನದಿಂದ ಬೇಸತ್ತಿದ್ದ ಮಹೇಂದ್ರ ಸಿಂಗ್ ಧೋನಿ ಮತ್ತು ಬಳಗ ಈ ಬಾರಿ ಗೆಲುವಿನ ಹಾದಿಗೆ ಮರಳಲು ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನವೇ ಕಠಿಣ ಅಭ್ಯಾಸವನ್ನು ನಡೆಸಿತ್ತು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯೋಜನೆಯಂತೆ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನವನ್ನು ನೀಡುವುದರ ಮೂಲಕ ಚೆನ್ನೈ ಗೆಲುವಿನ ಹಾದಿಗೆ ಮರಳಿತು. ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ 7 ಪಂದ್ಯಗಳನ್ನಾಡಿರುವ ಚೆನ್ನೈ ತಂಡ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿ 2 ಪಂದ್ಯಗಳಲ್ಲಿ ಸೋಲನ್ನು ಕಂಡಿದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವಾಗಲೇ ಕೊರೊನಾ ಕಾರಣದಿಂದ ಪ್ರಸ್ತುತ ಐಪಿಎಲ್ ಟೂರ್ನಿ ರದ್ದಾಗಿರುವುದು ಚೆನ್ನೈ ಬಳಗಕ್ಕೆ ಹಾಗೂ ಕ್ರೀಡಾಭಿಮಾನಿಗಳಿಗೆ ಬೇಸರವನ್ನುಂಟುಮಾಡಿದೆ.

 

ಧೋನಿ ಅಭಿಮಾನಿಗಳಿಗೆ ಐಪಿಎಲ್ ರದ್ದಾಗಿರುವುದು ಒಂದೆಡೆ ಬೇಸರವನ್ನುಂಟುಮಾಡುತ್ತಿದ್ದರೆ ಮತ್ತೊಂದೆಡೆ ಧೋನಿ ಮುಂದಿನ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುತ್ತಾರಾ ಅಥವಾ ಇಲ್ಲವಾ ಎಂಬ ಬೇಸರ ಮೂಡಿದೆ. ಹೌದು ಧೋನಿ ಮುಂದಿನ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವುದು ಅನುಮಾನ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿವೆ. ಈ ಚರ್ಚೆ ಕುರಿತು ಪ್ರತಿಕ್ರಿಯಿಸುತ್ತಿರುವ ಧೋನಿ ಅಭಿಮಾನಿಗಳು ಒಂದು ವೇಳೆ ಈ ಸುದ್ದಿ ನಿಜವಾಗಿದ್ದೇ ಆದಲ್ಲಿ ತಮ್ಮ ನೆಚ್ಚಿನ ಆಟಗಾರನಿಗೆ ಬೀಳ್ಕೊಡುಗೆ ಕೂಡ ಸಿಗುವುದಿಲ್ಲವಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿಯೂ ಸಹ ಧೋನಿ ಬೀಳ್ಕೊಡುಗೆ ಪಂದ್ಯವನ್ನು ಆಡಿರಲಿಲ್ಲ ಇದೀಗ ಐಪಿಎಲ್ ಟೂರ್ನಿಯಲ್ಲಿಯೂ ಸಹ ಬೀಳ್ಕೊಡುಗೆ ಪಂದ್ಯ ಆಡದೇ ವಿದಾಯ ಹೇಳುತ್ತಾರಾ ಎಂದು ಧೋನಿ ಅಭಿಮಾನಿಗಳು ಚಿಂತಿಸತೊಡಗಿದ್ದಾರೆ.

 

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...