ಐಪಿಎಲ್: ದಾಖಲೆ ಬರೆದು ಕೆಎಲ್ ರಾಹುಲ್‌ನ್ನು ಹಿಂದಿಕ್ಕಿದ ರುತುರಾಜ್!

1
57

ಐಪಿಎಲ್‌ನ ಫೈನಲ್ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮಧ್ಯೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಸೋತಿದ್ದು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಪಡೆದಿದೆ. ಈ ಸಂದರ್ಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಯುವ ಆಟಗಾರ ಋತುರಾಜ್ ಗಾಯಕ್ವಾಡ್ ವಿಶೇಷ ಸಾಧನೆಯೊಂದನ್ನು ಮಾಡಿದ್ದು ಹೊಸ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಈ ಬಾರಿಯ ಐಪಿಎಲ್‌ನಲ್ಲಿ ಅಮೋಘ ಫಾರ್ಮ್ ಪ್ರದರ್ಶಿಸಿರುವ ಯುವ ಆಟಗಾರ ಋತುರಾಜ್ ಗಾಯಕ್ವಾಡ್ ಐಪಿಎಲ್ ಇತಿಹಾಸದಲ್ಲಿ ಆರೆಂಜ್ ಕ್ಯಾಪ್ ಧರಿಸಿದ ಅತ್ಯಂತ ಕಿರಿಯ ಕ್ರಿಕೆಟಿಗ ಎನಿಸಿದ್ದಾರೆ.ಕೆಕೆಆರ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಋತುರಾಜ್ ಗಾಯಕ್ವಾಡ್ ಈ ಸಾಧನೆ ಮಾಡಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಳ್ಳಲು ಫೈನಲ್ ಪಂದ್ಯದಲ್ಲಿ ಋತುರಾಜ್ ಗಾಯಕ್ವಾಡ್ 24 ರನ್‌ಗಳನ್ನು ಗಳಿಸಬೇಕಾಗುತ್ತು. ಇದನ್ನು ಮೀರಿನಿಂತ ಋತುರಾಜ್ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬಳಿಯಿದ್ದ ಆರೆಂಜ್ ಕ್ಯಾಪನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.

ಐಪಿಎಲ್ 2021ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಇಯಾನ್ ಮಾರ್ಗನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿತ್ತು. ಹೀಗಾಗಿ ಆರಂಭಿನಾಗಿ ಋರುರಾಜ್ ಗಾಯಕ್ವಾಡ್ ಫಾಫ್ ಡು ಪ್ಲೆಸಿಸ್ ಜೊತೆಗೆ ಕಣಕ್ಕಿಳಿದರು. ಈ ಪಂದ್ಯದಲ್ಲಿ ಮತ್ತೊಮ್ಮೆ ಅದ್ಭುತವಾದ ಆರಂಭವನ್ನು ಸಿಎಸ್‌ಕೆ ಪರವಾಗಿ ನೀಡಿದ ಈ ಜೋಡಿ ಮೊದಲ ವಿಕೆಟ್‌ಗೆ 61 ರನ್‌ಗಳ ಕೊಡುಗೆಯನ್ನು ನೀಡಿದರು. ನಂತರ 27 ಎಸೆತಗಳಲ್ಲಿ 32 ರನ್‌ಗಳಿಸಿದ ಋತುರಾಜ್ ಗಾಯಕ್ವಾಡ್ ಸುನಿಲ್ ನರೈನ್‌ಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದ್ದಾರೆ.

1 COMMENT

LEAVE A REPLY

Please enter your comment!
Please enter your name here