ಐಪಿಎಲ್ ನಡೆಸಲು ಐಸಿಸಿ ಬಿಡುವುದಿಲ್ಲ!

1
64

ಈ ಬಾರಿಯ ಐಪಿಎಲ್ ಟೂರ್ನಿ ಕೊರೊನಾವೈರಸ್ ಕಾರಣದಿಂದ ಅರ್ಧಕ್ಕೆ ಮೊಟಕುಗೊಂಡು ಮುಂದೂಡಲ್ಪಟ್ಟಿರುವ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ. ಹೀಗೆ ಮುಂದೂಡಲ್ಪಟ್ಟಿರುವ ಐಪಿಎಲ್ ಟೂರ್ನಿಯನ್ನು ಸೆಪ್ಟೆಂಬರ್ 19ರಿಂದ ಪುನರಾರಂಭಿಸಲಾಗುವುದು ಎಂಬ ಸುದ್ದಿ ಕೆಲ ದಿನಗಳ ಹಿಂದಷ್ಟೇ ಹರಿದಾಡಿತ್ತು.


ಹೌದು ಸೆಪ್ಟೆಂಬರ್ 19ರಿಂದ ಅಕ್ಟೋಬರ್ 10ರವರೆಗೆ ಯುಎಇಯಲ್ಲಿ ಉಳಿದಿರುವ 31 ಐಪಿಎಲ್ ಪಂದ್ಯಗಳನ್ನು ನಡೆಸಲಾಗುವುದು ಎಂಬ ಸುದ್ದಿ ಹರಿದಾಡಿತ್ತು. ಟಿ ಟ್ವೆಂಟಿ ವಿಶ್ವಕಪ್‌ಗೂ ಮುನ್ನವೇ ಯುಎಇಯಲ್ಲಿ ಐಪಿಎಲ್ ಟೂರ್ನಿಯನ್ನು ಮುಗಿಸುವ ಯೋಜನೆಯನ್ನು ಬಿಸಿಸಿಐ ಹಾಕಿಕೊಂಡಿದೆ ಎನ್ನಲಾಗುತ್ತಿದೆ. ಆದರೆ ಈ ಎಲ್ಲಾ ಸುದ್ದಿಗಳ ಕುರಿತು ಇದೀಗ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಪ್ರತಿಕ್ರಿಯಿಸಿದ್ದು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೂ ಮುನ್ನವೇ ಯುಎಇಯಲ್ಲಿ ಐಪಿಎಲ್ ನಡೆಸಲು ಯಾವುದೇ ಕಾರಣಕ್ಕೂ ಐಸಿಸಿ ಒಪ್ಪುವುದಿಲ್ಲ ಎಂದಿದ್ದಾರೆ.


‘ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಈ ವರ್ಷ ನಡೆಯಬೇಕಿದ್ದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಯುಎಇಯಲ್ಲಿ ನಡೆಸುವ ಸಾಧ್ಯತೆಯಿದೆ. ಅಕ್ಟೋಬರ್ ಹಾಗೂ ನವೆಂಬರ್ ತಿಂಗಳುಗಳಲ್ಲಿ ಯುಎಇಯಲ್ಲಿ ಟಿ ಟ್ವೆಂಟಿ ವಿಶ್ವಕಪ್ ನಡೆಯುವ ಕಾರಣ ಸೆಪ್ಟೆಂಬರ್ ತಿಂಗಳಿನಲ್ಲಿ ಯಾವುದೇ ಕಾರಣಕ್ಕೂ ಐಪಿಎಲ್ ನಡೆಸಲು ಅನುಮತಿ ನೀಡುವುದಿಲ್ಲ. ಏಕೆಂದರೆ ಯುಎಇಯ 3 ಪಿಚ್‌ಗಳಲ್ಲಿ 31 ಐಪಿಎಲ್ ಪಂದ್ಯಗಳನ್ನು ನಡೆಸಿದರೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಬೇಕಾದ ಪಿಚ್ ಗುಣಮಟ್ಟತೆ ಇರುವುದಿಲ್ಲ. ಹೀಗಾಗಿ ಐಸಿಸಿ ಯುಎಇಯಲ್ಲಿ ಐಪಿಎಲ್ ನಡೆಸುವುದನ್ನು ಇಷ್ಟಪಡುವುದಿಲ್ಲ’ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

1 COMMENT

LEAVE A REPLY

Please enter your comment!
Please enter your name here