ಐಪಿಎಲ್ : 2020ರಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿ

Date:

2020ರ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಟಾಪ್ 5 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ.

5. ಇಶಾನ್ ಕಿಶನ್ : 516 ರನ್

ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಇಶಾನ್ ಕಿಶನ್ 13 ಇನ್ನಿಂಗ್ಸ್‌ಗಳಲ್ಲಿ ಆಡಿ 516 ರನ್ ಬಾರಿಸುವ ಮೂಲಕ ಆ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.

4. ಶ್ರೇಯಸ್ ಐಯ್ಯರ್ : 519 ರನ್

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿದ್ದ ಶ್ರೇಯಸ್ ಐಯ್ಯರ್ 17 ಇನ್ನಿಂಗ್ಸ್‌ನಲ್ಲಿ 519 ರನ್ ಬಾರಿಸುವುದರ ಮೂಲಕ 2020ರ ಐಪಿಎಲ್ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.

3. ಡೇವಿಡ್ ವಾರ್ನರ್ : 548 ರನ್
ಸನ್ ರೈಸರ್ ಹೈದರಾಬಾದ್ ತಂಡದ ಸ್ಫೋಟಕ ಆಟಗಾರ ಡೇವಿಡ್ ವಾರ್ನರ್ ಕಳೆದ ಬಾರಿಯ ಐಪಿಎಲ್ ಆವೃತ್ತಿಯಲ್ಲಿ 548 ಬಾರಿಸುವ ಮೂಲಕ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

2. ಶಿಖರ್ ಧವನ್ : 618 ರನ್

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಶಿಖರ್ ಧವನ್ ಕಳೆದ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. 17 ಇನ್ನಿಂಗ್ಸ್‌ಗಳಲ್ಲಿ ಆಡಿದ್ದ ಶಿಖರ್ ಧವನ್ ಗಳಿಸಿದ್ದು 618 ರನ್.

1. ಕೆಎಲ್ ರಾಹುಲ್ : 670 ರನ್

ಕಿಂಗ್ಸ್ ಇಲೆವೆನ್ ಪಂಜಾಬ್ ( ಈಗಿನ ಪಂಜಾಬ್ ಕಿಂಗ್ಸ್ ) ತಂಡದ ಕೆ ಎಲ್ ರಾಹುಲ್ ಕಳೆದ ಬಾರಿಯ ಐಪಿಎಲ್ ಆವೃತ್ತಿಯಲ್ಲಿ 14 ಇನ್ನಿಂಗ್ಸ್‌ ಆಡಿ 670 ರನ್ ಬಾರಿಸುವುದರ ಮೂಲಕ ಆ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದರು.

Share post:

Subscribe

spot_imgspot_img

Popular

More like this
Related

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಬೆಂಗಳೂರು: ಬೆಂಗಳೂರು...

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...