ಐಶ್ವರ್ಯ ಗೌಡ ಮೇಲೆ ಮತ್ತೊಂದು ಎಫ್ ಐ ಆರ್ ದಾಖಲು..!

Date:

ಐಶ್ವರ್ಯ ಗೌಡ ಮೇಲೆ ಮತ್ತೊಂದು ಎಫ್ ಐ ಆರ್ ದಾಖಲು..!

ಬೆಂಗಳೂರು: 9 ಕೋಟಿ ಚಿನ್ನ ವಂಚನೆ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದ ಐಶ್ವರ್ಯಾ ಗೌಡ ಮೇಲೆ ಮತ್ತಷ್ಟು ದೂರುಗಳು ದಾಖಲಾಗುತ್ತಿದೆ. ಇದೀಗ ಸ್ತ್ರೀ ರೋಗ ತಜ್ಞೆ ಮಂಜುಳ ಪಾಟೀಲ್ ಅವರಿಗೂ ಕೂಡ ಐಶ್ವರ್ಯಗೌಡ ವಂಚನೆ ಮಾಡಿರುವುದಾಗಿ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವೈದ್ಯೆ ಮಂಜುಳ ಪಾಟೀಲ್ ಅವರ ಕ್ಲಿನಿಕ್‌ಗೆ ಬಂದು ಐಶ್ವರ್ಯಗೌಡ ತಾನು ಡಿಕೆ ಸುರೇಶ್ ತಂಗಿ ಎಂದು ಹೇಳಿ ವೈದ್ಯೆಯನ್ನು ಪರಿಚಯ ಮಾಡಿಕೊಂಡಿದ್ದರು. ಜೊತೆಗೆ ಗೋಲ್ಡ್ ಬಿಸಿನೆಸ್, ಕೆಸಿನೊ, ಹಾಗೂ ದೊಡ್ಡ ಮಟ್ಟದಲ್ಲಿ ಬಿಸಿನೆಸ್ ಮಾಡುತ್ತಿರುವುದಾಗಿ ತಿಳಿಸಿದ್ದಳು.
2022ರಿಂದ ಹಂತ ಹಂತವಾಗಿ ಹೂಡಿಕೆ ನೆಪದಲ್ಲಿ ಐಶ್ವರ್ಯಾಗೌಡ ಹಣ ಪಡೆದಿರುತ್ತಾಳೆ. ಒಟ್ಟು 2.52 ಕೋಟಿ ಹಣ ಹಾಗೂ 2.350 ಕೆಜಿ ಚಿನ್ನಾಭರಣ ಪಡೆದು ವಂಚನೆ ಮಾಡಿದ್ದಾಳೆ ಎಂದು ವೈದ್ಯೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಈ ಸಂಬಂಧ ಆರ್‌ಆರ್‌ನಗರ ಪೊಲೀಸ್ ಠಾಣೆಯಲ್ಲಿ ಐಶ್ವರ್ಯಗೌಡ ಹಾಗು ಇಬ್ಬರು ಡ್ರೈವರ್‌ಗಳಾದ ಅಶ್ವಥ್ ಗೌಡ ಹಾಗೂ ಧನಂಜಯ್ಯನ ವಿರುದ್ಧ ಎಫ್‌ಐಆಆರ್ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...