ಐಸಿಡಿಎಸ್ ಪರಿಣಾಮಕಾರಿ ಅನುಷ್ಠಾನ: ದೇಶದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಐಸಿಡಿಎಸ್ ಪರಿಣಾಮಕಾರಿ ಅನುಷ್ಠಾನ: ದೇಶದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 28: ಐಸಿಡಿಎಸ್ , ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆಯ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಗಳನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ದೂರದೃಷ್ಟಿಯ ಯೋಜನೆ
ಅಕ್ಟೋಬರ್ 2, 2025 ಕ್ಕೆ ಐಸಿಡಿಎಸ್ ಕಾರ್ಯಕ್ರಮಕ್ಕೆ 50 ವರ್ಷಗಳು ತುಂಬಿರುವುದು ಮೈಲುಗಲ್ಲು ಸಾಧನೆಯಾಗಿದೆ. ಭಾರತದ ಪ್ರಧಾನಿಯಾಗಿದ್ದ ಶ್ರೀಮತಿ ಇಂದಿರಾ ಗಾಂಧಿಯವರು ಹಮ್ಮಿಕೊಂಡಿದ್ದ ದೂರದೃಷ್ಟಿಯ ಯೋಜನೆಯೇ ಐಸಿಡಿಎಸ್. ಎಪ್ಪತ್ತರ ದಶಕದಲ್ಲಿ ಮಹಿಳೆ ಮತ್ತು ಮಕ್ಕಳಲ್ಲಿ ಅಪೌಷ್ಠಿಕತೆ ,ಶಿಶು ಮತ್ತು ತಾಯಿಮರಣ ಹೆಚ್ಚಿದ ಸಂದರ್ಭದಲ್ಲಿ ಈ ಕಾರ್ಯಕ್ರಮ ಜಾರಿಯಾಗಿತ್ತು. ಶ್ರೀಮತಿ ಇಂದಿರಾಗಾಂಧಿಯವರು, ತಾಯಿ ಮತ್ತು ಮಕ್ಕಳ ಮರಣ ತಡೆಗಟ್ಟಲು ಹಾಗೂ ಅವರಲ್ಲಿ ಅಪೌಷ್ಠಿಕತೆ ನಿವಾರಿಸುವ ಉದ್ದೇಶದಿಂದ ಜಾರಿ ಮಾಡಿದರು. ರಾಜ್ಯದಲ್ಲಿ 69,922 ಅಂಗನವಾಡಿ ಕೇಂದ್ರಗಳಿದ್ದು, ಸುಮಾರು 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಈ ಕೇಂದ್ರಗಳಿಂದ ಲಾಭ ಪಡೆಯುತ್ತಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮೊದಲು ಪ್ರಾರಂಭಗೊಂಡ ಅಂಗನವಾಡಿ ಕೇಂದ್ರ, 33 ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸಿತು. ಪ್ರಸ್ತುತ ರಾಜ್ಯಾದ್ಯಂತ 69,922 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

Share post:

Subscribe

spot_imgspot_img

Popular

More like this
Related

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ...

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ ಬೆಂಗಳೂರು:...

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್ ಬಡ್ತಿ, 20 ಮಂದಿಗೆ ವರ್ಗಾವಣೆ

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್...

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು ರಾತ್ರಿ...