ಒಲಪಿಂಕ್ ಗ್ರಾಮಗಳಲ್ಲಿ ಕಾಂಡೋಮ್ ಪೂರೈಕೆಯಿಲ್ಲ

Date:

ಟೋಕಿಯೋ ಒಲಿಂಪಿಕ್ಸ್‌ ಆಯೋಜಕರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಮಾಡಬಹುದಾದ ಮತ್ತು ಮಾಡಬಾರದ ಸಂಗತಿಗಳು ಬಗ್ಗೆ ಪಟ್ಟಿ ಪ್ರಕಟಿಸಿದ್ದಾರೆ. ಈ ಪಟ್ಟಿಯಲ್ಲಿ ಒಲಿಂಪಿಕ್ಸ್‌ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದು ಬದಲಾವಣೆ ಕಾಣಿಸಿಕೊಂಡಿದೆ.
ಒಲಿಂಪಿಕ್ಸ್ ಕ್ರೀಡಾಕೂಟಗಳ ವೇಳೆ ಕಾಂಡೋಮ್ ವಿತರಿಸುವ ಸಂಪ್ರದಾಯ ಬಹಳ ಹಿಂದಿನಿಂದಲೂ ಚಾಲ್ತಿಯಲ್ಲಿತ್ತು. ಆದರೆ ಈ ಬಾರಿ ಟೋಕಿಯೋ ಒಲಿಂಪಿಕ್ಸ್ ವಿಲೇಜ್ ಗಳಲ್ಲಿ ಕಾಂಡೋಮ್ ವಿತರಿಸುತ್ತಿಲ್ಲ ಎಂದು ಆಯೋಜಕರು ಹೇಳಿದ್ದಾರೆ. ಕೋವಿಡ್ ಕಾರಣ ಕ್ರೀಡಾಪಟುಗಳು ಪರಸ್ಪರ ಸಂಪರ್ಕಿಸಲು ನಿರ್ಬಂಧವಿರುವುದರಿಂದ ಈ ಬದಲಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗೆ ಒಲಿಂಪಿಕ್ಸ್ ವಿಲೇಜ್‌ನಲ್ಲಿ ಕಾಂಡೋಮ್‌ಗಳನ್ನು ವಿತರಿಸಲಾಗುವುದಿಲ್ಲ. ಆದರೆ ಕ್ರೀಡಾಪಟುಗಳು ಗೇಮ್ಸ್ ಮುಗಿಸಿ ಹೊರಡುವಾಗ ಅವರಿಗೆ ಕಾಂಡೋಮ್ ಕೊಡಲಾಗುತ್ತದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.


ಆಯೋಜಕರ ಈ ಹೊಸ ನಿರ್ಧಾರ 1988ರಿಂದಲೂ ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವೊಂದು ಕೊನೆಗೊಳ್ಳುವಂತೆ ಮಾಡಿದೆ. ಅಕ್ವೈರ್ಡ್ ಇಮ್ಯುನೋಡೆಫಿಶಿಯೆನ್ಸಿ ಸಿಂಡ್ರೋಮ್ ಅಥವಾ ಏಡ್ಸ್‌ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಕಾಂಡೋಮ್ ವಿತರಣೆಯನ್ನು ಒಲಿಂಪಿಕ್ಸ್‌ನಲ್ಲಿ ಹಿಂದಿನಿಂದಲೂ ಪಾಲಿಸಿಕೊಂಡು ಬರಲಾಗಿತ್ತು.

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...