ಒಂಟಿ ಸಲಗ ದಾಳಿಗೆ ಕಾರ್ಮಿಕ ಮಹಿಳೆ ಸಾವು

Date:

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಜಿಲ್ಲೆಯ ಆಲ್ದೂರು ಸಮೀಪದ ಹೆಡೆದಾಳು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ವೀಣಾ (45) ಎಂದು ಗುರುತಿಸಲಾಗಿದೆ. ಮಹಿಳೆ ಕಾಫಿ ತೋಟಕ್ಕೆ ಕೆಲಸಕ್ಕೆ ಹೋಗುವ ವೇಳೆ ಆನೆ ದಾಳಿ ನಡೆಸಿದೆ. ಈ ವೇಳೆ ಮಹಿಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ. ಆದರೆ ಸಾಧ್ಯವಾಗಿಲ್ಲ. ಈ ವೇಳೆ ಆನೆ ದಾಳಿ ನಡೆಸಿ ಮಹಿಳೆಯ ತಲೆಯನ್ನು ತುಳಿದಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಕಳೆದ ಕೆಲವು ದಿನಗಳಿಂದ ಸುಮಾರು 7 ಕಾಡಾನೆಗಳು ಕಾಫಿ ತೋಟದ ಸುತ್ತಮುತ್ತವೇ ಬೀಡು ಬಿಟ್ಟಿವೆ. ಇದರಿಂದ ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಓಡಾಡುವುದು ಕಷ್ಟವಾಗಿದೆ. ಆನೆಗಳನ್ನು ಸ್ಥಳದಿಂದ ಓಡಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...