ಒಂದುವರೆ ತಿಂಗಳ ಬಳಿಕ BGS ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ತೀವ್ರವಾದ ಬೆನ್ನು ನೋವಿನ ಎಂದು ಮಧ್ಯಂತರ ಜಾಮೀನು ಪಡೆದಿದ್ದರು. ಜೈಲಿಂದ ರಿಲೀಸ್ ಆದ ಬಳಿಕ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು.ಈ ಕೇಸ್‌ನಲ್ಲಿ ಹೈಕೋರ್ಟ್‌ನ ರೆಗ್ಯೂಲರ್ ಬೇಲ್ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಸಿಕ್ಕಿತ್ತು. ಬೇಲ್ ಸಿಕ್ಕ ಬಳಿಕ ದರ್ಶನ್ ಸರ್ಜರಿಯನ್ನೇ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದರ್ಶನ್ ಕುಟುಂಬ ಫಿಸಿಯೋಥೆರಪಿ ಮೂಲಕವೇ ಬೆನ್ನುನೋವು ಗುಣಪಡಿಸಿಕೊಳ್ಳುವ ಪ್ಲ್ಯಾನ್ ಮಾಡಿದೆ, ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿದ್ದಾರೆ. ಆಸ್ಪತ್ರೆಯ ಬಿಲ್ ಸೇರಿದಂತೆ, ಎಲ್ಲಾ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ದರ್ಶನ್ ತಮ್ಮ ಕಾರಿನಲ್ಲಿ ತೆರಳಿದ್ದಾರೆ.
ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್‌ಗೆ ಕಳೆದ ಅಕ್ಟೋಬರ್ 31ರಂದು ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆದ 2-3 ದಿನಗಳ ಬಳಿಕ ದರ್ಶನ್ ಆಸ್ಪತ್ರೆಗೆ ದಾಖಲಾದರೂ ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಫೋಟೋ ಸಹ ವೈರಲ್ ಆಗಿತ್ತು. ಇದೀಗ ಚಿಕಿತ್ಸೆ ಪಡೆಯದೇ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ.