No menu items!
3.9 C
Munich
Wednesday, September 23, 2026

ಒಂದೇ ಗ್ರಾಮದ ಮೂವರು ಕಲುಷಿತ ನೀರು ಸೇವನೆಯಿಂದ ಸಾವು..!

Must read

ಒಂದೇ ಗ್ರಾಮದ ಮೂವರು ಕಲುಷಿತ ನೀರು ಸೇವನೆಯಿಂದ ಸಾವು..!

 

ಯಾದಗಿರಿ: ಕಲುಷಿತ ನೀರು ಸೇವನೆಯಿಂದ ಒಂದೇ ಗ್ರಾಮದ ಮೂವರು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ. ದೇವಿಕೆಮ್ಮ ಹೊಟ್ಟಿ(48) ವೆಂಕಮ್ಮ (60) ರಾಮಣ್ಣ ಪೂಜಾರಿ(50) ಮೃತ ದುರ್ದೈವಿಗಳಾಗಿದ್ದು,

10 ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ತಿಪ್ಪನಟಗಿ ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಗ್ರಾಮದ ಮೂವರು ಮೃತಪಟ್ಟಿದ್ದಾರೆ. ಆರು ಜನರ ಸ್ಥಿತಿ ಗಂಭೀರವಾಗಿದ್ದು,

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇನ್ನೂ 20 ಜನ ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ. ತಿಪ್ಪನಟಗಿ ಗ್ರಾಮಕ್ಕೆ ಸುರಪುರ ತಾಲೂಕು ಆರೋಗ್ಯ ಅಧಿಕಾರಿ ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -spot_img

More articles

- Advertisement -spot_img

Latest article