ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

Date:

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಳಗಾವಿ: ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆ ಬಗ್ಗೆ ಪದೇಪದೇ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸುತ್ತಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಧಾರಣೆಗಳ ಜೊತೆ ಮನ್ ರೇಗಾವನ್ನು ವಿಬಿ ಜಿ ರಾಮ್ ಜಿ ಯೋಜನೆ ಎಂದು ಪರಿವರ್ತಿಸಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಜೀ ಅವರು ಜಾರಿಗೊಳಿಸುತ್ತಿದ್ದಾರೆ. ದೇಶದ ಬಡವರು, ಕಾರ್ಮಿಕರಿಗೆ ಅನುಕೂಲ ಆಗಬೇಕೆಂದು ಈ ಕಾಯ್ದೆ ತಂದಿದ್ದಾರೆ. ಇದರ ಕುರಿತು ಚರ್ಚಿಸುವ ನೆಪದಲ್ಲಿ ವಿಶೇಷ ಅಧಿವೇಶನವನ್ನು ಕರೆದು ಬಿಜೆಪಿ ನೇತೃತ್ವದ ಎನ್ಡಿಎ ಸರಕಾರದ ವಿರುದ್ಧ ದ್ವೇಷ ಸಾಧಿಸಲು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಹೊರಟಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಶಾಸನಸಭೆಯ ಪಾವಿತ್ರ್ಯವನ್ನು ಹಾಳು ಮಾಡುವಂಥ ಕೆಲಸಕ್ಕೆ ಸರಕಾರ ಮುಂದಾಗಿದೆ. ಯಾವ ಸದನದಲ್ಲಿ ಈ ನಾಡಿನ ಜನರ ಒಳಿತು, ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಚರ್ಚೆ ಆಗಬೇಕಿತ್ತೋ ಅದನ್ನು ಕೇಂದ್ರ ಸರಕಾರದ ವಿರುದ್ಧ ಜನರನ್ನು ಎತ್ತಿ ಕಟ್ಟುವುದಕ್ಕೆ ಬಳಸುತ್ತಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...