ಒಟಿಟಿಯಲ್ಲಿ ಅಬ್ಬರಿಸಲು ದರ್ಶನ್ ರೆಡಿ!

Date:

‘ಚಾಲೆಂಜಿಂಗ್ ಸ್ಟಾರ್‌’ ದರ್ಶನ್ ಮತ್ತು ಆಶಾ ಭಟ್ ಅಭಿನಯದ ‘ರಾಬರ್ಟ್’ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಗಳಿಕೆ ಮಾಡಿದೆ. ಕಳೆದ ಮಾರ್ಚ್ 11ರಂದು ತೆರೆಗೆ ಬಂದ ಈ ಸಿನಿಮಾ ಈಗ ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಪ್ರಸಾರವಾಗುವುದಕ್ಕೆ ಸಜ್ಜಾಗಿದೆ. ಇದೇ ಏಪ್ರಿಲ್‌ 25ರಿಂದ ಕನ್ನಡ, ತೆಲುಗು ಸೇರಿದಂತೆ, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲೂ ರಾಬರ್ಟ್ ಪ್ರಸಾರ ಆರಂಭಿಸಲಿದೆ. ಚಿತ್ರದಲ್ಲಿ ದರ್ಶನ್ ಜೊತೆ ಜಗಪತಿ ಬಾಬು, ರವಿ ಕಿಶನ್, ವಿನೋದ್ ಪ್ರಭಾಕರ್, ರವಿಶಂಕರ್, ತೇಜಸ್ವಿನಿ ಪ್ರಕಾಶ್, ಚಿಕ್ಕಣ್ಣ, ಧರ್ಮಣ್ಣ ಕಡೂರ್, ಶಿವರಾಜ್ ಕೆ.ಆರ್. ಪೇಟೆ, ಸೋನಲ್, ಅಶೋಕ್ ಮುಂತಾದವರು ನಟಿಸಿದ್ದಾರೆ. ಚೊಚ್ಚಲ ಬಾರಿಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ.

ತರುಣ್ ಸುಧೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ ಈ ಸಿನಿಮಾಗೆ ಉಮಾಪತಿ ಶ್ರೀನಿವಾಸ ಗೌಡ ಅವರು ತಮ್ಮ ಉಮಾಪತಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಹಣ ಹಾಕಿದ್ದರು. ‘ಚಿತ್ರದ ಕಥಾವಸ್ತುವು ಪ್ರೇಕ್ಷಕರನ್ನು ತಲ್ಲೀನಗೊಳ್ಳುವಂತೆ ಮಾಡುತ್ತದೆ ಮತ್ತು ಚಿತ್ರದಲ್ಲಿನ ನನ್ನ ಪಾತ್ರವು ಸಖತ್ ಇಂಟರೆಸ್ಟಿಂಗ್ ಆಗಿದೆ. ದರೋಡೆಕೋರ, ನಿಷ್ಠಾವಂತ ಸ್ನೇಹಿತ ಮತ್ತು ಉತ್ತಮ ತಂದೆಯಂತಹ ವಿಭಿನ್ನ ಅವತಾರಗಳಲ್ಲಿ ನನ್ನನ್ನು ನೋಡುವ ಅವಕಾಶ ವೀಕ್ಷಕರಿಗೆ ಸಿಗಲಿದೆ’ ಎಂದಿದ್ದಾರೆ ನಟ ದರ್ಶನ್.

 

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...