ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು?: ಡಾ. ಜಿ ಪರಮೇಶ್ವರ್

tnit editors
1 Min Read

ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು?: ಡಾ. ಜಿ ಪರಮೇಶ್ವರ್

ಬೆಂಗಳೂರು: ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು? ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು? ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಿ ಬಿಡಲಿ. ಬೇರೆಯವರು ಇರುವುದೇ ಬೇಡವಾ ಎಂದು ಪ್ರಶ್ನಿಸಿದ್ದಾರೆ.
ಯಾವ ಒಪ್ಪಂದ ಆಗಿದೆಯೋ ನಮಗೆ ಗೊತ್ತಿಲ್ಲ. ನಾನು 2-3 ಜನರನ್ನು ದೆಹಲಿಯಲ್ಲಿ ಕೇಳಿದೆ, ಇಲ್ಲೂ ಕೇಳಿದೆ. ಒಪ್ಪಂದ ಆಗಿದೆ ಎಂದು ಯಾರೂ ಹೇಳಿಲ್ಲ. ಡಿಕೆ ಶಿವಕುಮಾರ್ ಯಾವ ಅರ್ಥದಲ್ಲಿ ‌ಹೇಳಿದರೋ ಗೊತ್ತಿಲ್ಲ. ಯಾವುದೇ ಒಪ್ಪಂದ ಆಗಿಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಆ ರೀತಿ ಆಗಲು ಸಾಧ್ಯವಿಲ್ಲ, ಹೈಕಮಾಂಡ್ ಬಿಟ್ಟು ಹೋಗಲ್ಲ. ಹೈಕಮಾಂಡ್ ತೀರ್ಮಾನ ಒಪ್ಪಿಕೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದರು.

Share This Article