ಒಮಿಕ್ರಾನ್ ತಡೆಗೆ ಕೇಂದ್ರದಿಂದ ಮಹತ್ವದ ಆದೇಶ

Date:

ದೇಶದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ಪತ್ತೆಯಾದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಪತ್ರ ಬರೆಯಲಾಗಿದೆ.

ಭಾರತದಲ್ಲಿ ಒಮಿಕ್ರಾನ್ ಹರಡುವಿಕೆ ಪ್ರಾಥಮಿಕ ಹಂತದಲ್ಲಿದೆ. ಈ ವೈರಸ್ ಹೆಚ್ಚು ವೇಗವಾಗಿ ಹರಡಲಿದೆ.

ಒಮಿಕ್ರಾನ್ ಹರಡುವಿಕೆಯನ್ನು ಎಲ್ಲಾ ರಾಜ್ಯಗಳು ತಡೆಗಟ್ಟಬೇಕು. ಸೋಂಕು ನಿಯಂತ್ರಣಕ್ಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಹೆಚ್ಚು ಜಾಗರೂಕರಾಗಿ ಕೆಲಸ ನಿರ್ವಹಿಸಬೇಕಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಸೋಂಕು ಹರಡುವುದನ್ನು ನಿಲ್ಲಿಸಲು ಪಾಸಿಟಿವ್ ಬಂದ ವ್ಯಕ್ತಿಯ ಎಲ್ಲಾ ಸಂಪರ್ಕಗಳನ್ನು 72 ಗಂಟೆಯೊಳಗೆ ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಬೇಕು. ಹೆಚ್ಚು ಪರೀಕ್ಷೆ ನಡೆಸಬೇಕು. ಕ್ಲಸ್ಟರ್ ಗಳು, ಹಾಟ್ಸ್ಪಾಟ್ ಗಳನ್ನು ಪತ್ತೆ ಹಚ್ಚಿ ಸಕ್ರಿಯ ಕಣ್ಗಾವಲು ಇಡಬೇಕು ಎಂದು ಸೂಚಿಸಲಾಗಿದೆ.

ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾವಾರು ಪ್ರಕರಣಗಳ ಸಂಖ್ಯೆ, ಪರೀಕ್ಷೆಯ ದರ ಮತ್ತು ಧನಾತ್ಮಕತೆಯನ್ನು ಸಕ್ರಿಯವಾಗಿ ಅನುಸರಿಸುತ್ತಿರಬೇಕು. ಸಾರ್ವಜನಿಕ ಆರೋಗ್ಯ ಕ್ರಮಗಳಾದ ಸಂಪರ್ಕ ಪತ್ತೆಹಚ್ಚುವಿಕೆ, ಸಂಪರ್ಕಗಳ ಕ್ವಾರಂಟೈನ್, ಧನಾತ್ಮಕವಾಗಿ ಕಂಡುಬಂದವರನ್ನು ಪ್ರತ್ಯೇಕಿಸುವುದು ಮತ್ತು ಸರಿಯಾದ ನಿಯಂತ್ರಣವನ್ನು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಹೇಳಲಾಗಿದೆ.

ಎಲ್ಲಾ ರೂಪಾಂತರಗಳು ಅಪಾಯಕಾರಿಯಲ್ಲ. ರೂಪಾಂತರಗಳ ಉತ್ಪಾದನೆಯನ್ನು ತಪ್ಪಿಸುವ ಪ್ರಮುಖ ಹಂತವೆಂದರೆ ಸೋಂಕುಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ಎಂದು ಅದು ಹೇಳಲಾಗಿದ್ದು, ಭಾರತ ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಕಾಲಕಾಲಕ್ಕೆ ಸೂಕ್ತ ಮಾರ್ಗಸೂಚಿಗಳನ್ನು ನೀಡುತ್ತಿದೆ ಎಂದು ಸಚಿವಾಲಯದಿಂದ ಪತ್ರ ಬರೆದು ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...