ಕೇರಳದಲ್ಲಿ ಓಣಂ ಹಬ್ಬದ ಆಚರಣೆ ಬೆನ್ನಲ್ಲೇ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಶೇ.30ರಷ್ಟು ಏರಿಕೆ ಕಂಡು ಬಂದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಂದೇ ದಿನ 31,445 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಸೋಂಕಿಗೆ 215 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 19,972ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಒಂದು ದಿನದಲ್ಲಿ 1,65,273 ಮಂದಿಗೆ ಕೊವಿಡ್-19 ಸೋಂಕಿನ ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರವು ಶೇ.19.3ರಷ್ಟಿದೆ.
ಆಗಸ್ಟ್ 23ರ ಓಣಂ ಹಬ್ಬದ ದಿನ ಕೇರಳದಲ್ಲಿ 17,106 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 83 ಮಂದಿ ಸೋಂಕಿನಿಂದ ಮೃತಪಟ್ಟಿದ್ದರು. ಅಂದು ರಾಜ್ಯದಲ್ಲಿ ಕೊರೊನಾವೈರಸ್ ಪಾಸಿಟಿವಿಟಿ ದರ ಶೇ.17.73ರಷ್ಟಿತ್ತು. ಮಂಗಳವಾರ ಪಾಸಿಟಿವಿಟಿ ದರವು 18.04ಕ್ಕೆ ಏರಿಕೆಯಾಗಿತ್ತು.