ಔತಣಕೂಟವನ್ನು ರದ್ದು ಮಾಡಿಲ್ಲ, ಮುಂದೂಡಿಕೆ ಮಾಡಿದ್ದೇವೆ ಅಷ್ಟೆ: ಡಾ. ಜಿ ಪರಮೇಶ್ವರ್
ಬೆಂಗಳೂರು: ಔತಣಕೂಟವನ್ನು ರದ್ದು ಮಾಡಿಲ್ಲ, ಮುಂದೂಡಿಕೆ ಮಾಡಿದ್ದೇವೆ ಅಷ್ಟೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಔತಣಕೂಟವನ್ನು ರದ್ದು ಮಾಡಿಲ್ಲ, ಮುಂದೂಡಿಕೆ ಮಾಡಿದ್ದೇವೆ ಅಷ್ಟೆ. ನಮ್ಮ ಔತಣಕೂಟಕ್ಕೆ ಹೈಕಮಾಂಡ್ ವಿರೋಧ ಇಲ್ಲ.
ಚಿತ್ರದುರ್ಗ ಸಮಾವೇಶ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದೆವು. ಔತಣಕೂಟ ಬಗ್ಗೆ ನಾವು ದೆಹಲಿಗೆ ಏನೂ ಹೇಳಿರಲಿಲ್ಲ. ಶಾಸಕರ ಮೀಟಿಂಗ್ ಅಂದಾಗ ಅವರ ಗಮನಕ್ಕೆ ಹೋಗುತ್ತದೆ.
ಹೀಗಾಗಿ ರಣದೀಪ್ ಸುರ್ಜೇವಾಲ ಕರೆ ಮಾಡಿ ಅವರೂ ಸಹ ಭಾಗವಹಿಸಲು ಉತ್ಸುಕವಾಗಿರುವುದಾಗಿ ತಿಳಿಸಿದರು. ಹಾಗಾಗಿ ಅವರಿಗೂ ಆಹ್ವಾನ ಕೊಟ್ಟಿದ್ದೇವೆ. ಮುಂದೆ ಸಮಯ ಕೋಡುತ್ತೇನೆ ಎಂದು ನಮಗೆ ಹೇಳಿದ್ದಾರೆ. ಹಾಗಾಗಿ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.