ಆಟವಾಡುತ್ತಿದ್ದ ಸಂದರ್ಭದಲ್ಲಿ ಸಂಪಿಗೆ ಬಿದ್ದು ಅಣ್ಣ, ತಂಗಿ ಮೃತಪಟ್ಟ ಘಟನೆ ಕೊಡಿಗೆಹಳ್ಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.
ಬೆಂಗಳೂರು ಕೆ.ಆರ್. ಪುರಂ ಸಮೀಪದಲ್ಲಿರುವ ಕೊಡಿಗೆಹಳ್ಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಆಟವಾಡುತ್ತಿದ್ದ ಐದು ವರ್ಷದ ಅಣ್ಣ, ಒಂದೂವರೆ ವರ್ಷದ ತಂಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ಯಾದಗಿರಿ ಮೂಲದ ದಂಪತಿಯ ಮಕ್ಕಳಾಗಿದ್ದಾರೆ. ಪೋಷಕರು ಮಕ್ಕಳನ್ನು ಆಟವಾಡಲು ಬಿಟ್ಟು ಕಟ್ಟಡದ ಕೆಲಸ ಮಾಡುವಾಗ ಈ ಅನಾಹುತ ಸಂಭವಿಸಿದೆ. ಕೆ.ಆರ್. ಪುರಂ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.