ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ಭದ್ರ ಕೋಟೆ ಎಂದೇ ಕರೆಯಲ್ಪಡುತ್ತಿರುವ ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಯ ರಣಕಹಳೆಯನ್ನು ಮೊಳಗಿಸಿದ್ದಾರೆ. ಕನ್ನಡದಲ್ಲಿ ಭಾಷಣ ಪ್ರಾರಂಭ ಮಾಡಿದ ಮೋದಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆರು.
ಕಲಬುರಗಿಯು ತ್ಯಾಗ, ಶ್ರಮಕ್ಕೆ ಹೆಸರುವಾಸಿಯಾಗಿದೆ. ಈ ಪುಣ್ಯಭೂಮಿಯ ಬಸವಣ್ಣ, ಹನುಮ ಗಾಣಿಪುರದ ದತ್ತಾತ್ರೇಯಗೆ ನಮಸ್ಕಾರಗಳು ಎಂದ ಮೋದಿ, ಮೈತ್ರಿ ಸರ್ಕಾರವನ್ನು ಕಟುವಾಗಿ ಟೀಕಿಸಿದರು. ಅಭಿವೃದ್ಧಿ ವಿಷಯದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಬೆಂಗಳೂರಿನಲ್ಲಿ ಕೂತಿರುವ ಸರ್ಕಾರ ರೈತರ ಸಾಲ ಮನ್ನಾ ಮಾಡಿಲ್ಲ. ರೈತರಿಗೆ ಹಣ ನೀಡದೇ ಮೋಸ ಮಾಡುತ್ತಿದೆ. ಇದು ರೈತ ವಿರೋಧಿ ಸರ್ಕಾರ. ಇಲ್ಲಿನ ಮುಖ್ಯಮಂತ್ರಿಯ ರಿಮೋರ್ಟ್ ಇನ್ನೊಬ್ಬರ ಹತ್ತಿರ ಇದೆ. ಅವರು ಹೇಳಿದಂತೆ ಸಿಎಂ ಕೇಳಬೇಕು ಎಂದು ಟೀಕಿಸಿದರು.
ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಮೋದಿ ಆಗಮನಕ್ಕೂ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆಗೊಂಡರು. ಬಳಿಕ ಮೋದಿ ಜೊತೆ ವೇದಿಕೆಯಲ್ಲಿ ಕಾಣಿಸಿಕೊಂಡರು. 9 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಜನಾದೇಶ ಪಡೆದಿರುವ ಹಾಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಜಾಧವ್ ಸ್ಪರ್ಧಿಸಲಿದ್ದಾರೆ.
ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ರಾಜ್ಯ ಸರ್ಕಾರದ ಬಗ್ಗೆ ಹೇಳಿದ್ದೇನು?
Date: